ಮೇ 23 ಕ್ಕೆ ಟೋಕಿಯೋಗೆ ತೆರೆಳುತ್ತಿರುವ ಪ್ರಧಾನಿ, ಜಪಾನ್ ಪ್ರವಾಸ ವಿಶೇಷವೇನು ಗೊತ್ತಾ ?
ಪ್ರಧಾನಿ ನರೇಂದ್ರ ಮೋದಿ ಅವರು ಮೇ 23 ರಂದು ತಮ್ಮ ಎರಡು ದಿನಗಳ ಭೇಟಿಗಾಗಿ ಜಪಾನ್ ರಾಜಧಾನಿ ಟೋಕಿಯೋಗೆ ಹೋಗುತ್ತಿದ್ದಾರೆ. ಭೇಟಿಗೂ ಮುನ್ನ ಪ್ರಧಾನಿ ಮೋದಿ ಅವರು ಈ ಭೇಟಿಯ ಉದ್ದೇಶವನ್ನು ತಿಳಿಸಿದ್ದರು.
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್‌ಗೆ ಹೋಗುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುವ ಉದ್ದೇಶದಿಂದ ತಮ್ಮ ಸಂವಾದವನ್ನು ಮುಂದುವರಿಸಲು ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಜಪಾನ್‌ನಲ್ಲಿ ನಡೆಯಲಿರುವ ಎರಡನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ತಾವು ವೈಯಕ್ತಿಕವಾಗಿ ಭಾಗವಹಿಸಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಅಮೆರಿಕ ಅಧ್ಯಕ್ಷರನ್ನೂ ಭೇಟಿ ಮಾಡುತ್ತೇನೆ: ಪ್ರಧಾನಿ ಮೋದಿ
ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದು, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ್ರಾದೇಶಿಕ ಅಭಿವೃದ್ಧಿ ಮತ್ತು ಸಮಕಾಲೀನ ಜಾಗತಿಕ ಸಮಸ್ಯೆಗಳ ಕುರಿತು ನಾವು ನಮ್ಮ ಸಂವಾದವನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಹೊಸದಾಗಿ ಆಯ್ಕೆಯಾದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಮೊದಲ ಬಾರಿಗೆ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ನಾನು ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನು ಎದುರು ನೋಡುತ್ತಿದ್ದೇನೆ, ಈ ಸಂದರ್ಭದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದಡಿಯಲ್ಲಿ ಬಹುಮುಖಿ ಸಹಕಾರ ಮತ್ತು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಲಾಗುವುದು.