65ನೇ ಕನ್ನಡ ರಾಜ್ಯೋತ್ಸವ : ಕನ್ನಡದಲ್ಲಿ ಟ್ವೀಟ್ ಮಾಡಿ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ 65th Kannada Rajyotsava
ಹೊಸದಿಲ್ಲಿ, ನವೆಂಬರ್01: 65ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. 65th Kannada Rajyotsava
ತಮ್ಮ ಟ್ವಿಟರ್ ಖಾತೆಯಲ್ಲಿ ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೆ ಬೋಗಿ ಆ್ಯಂಟಿ ಕೋವಿಡ್ ಕೋಚ್ ಆಗಿ ಪರಿವರ್ತನೆ
ಪ್ರಧಾನಿ ಮೋದಿಯವರು ಕನ್ನಡದಲ್ಲಿಯೇ ಶುಭಾಶಯ ಕೋರಿರುವ ಹಿನ್ನಲೆಯಲ್ಲಿ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ರೀ ಟ್ವೀಟ್ ಮಾಡುತ್ತಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2020
ಪ್ರಧಾನಿ ಮೋದಿಯವರು ಕನ್ನಡದಲ್ಲಿ ಶುಭಾಶಯ ಕೋರಿರುವ ಟ್ವೀಟ್ ಗೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ರೀ ಟ್ವೀಟ್ ಮಾಡುವ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ರಾಜ್ಯದ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ!” ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ