Prahlad Modi : ಅನಾರೋಗ್ಯದಿಂದ ಚೆನೈ ಆಸ್ಪತ್ರೆಗೆ ದಾಖಲಾದ ಪ್ರಧಾನಿ ಮೋದಿ ಸಹೋದರ….
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅನಾರೋಗ್ಯದಿಂದಾಗಿ ಚೆನೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಸಗಿದೆ.
ದಾಮೋದರದಾಸ್ ಮುಲ್‌ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‌ಗೆ ಜನಿಸಿದ ಐದು ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರ ಸಹೋದರ ಮತ್ತು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದರು. ಪ್ರಹ್ಲಾದ್ ಮೋದಿ ಅವರು ಪತ್ನಿ, ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಮರ್ಸಿಡಿಸ್ ಬೆಂಜ್ ಎಸ್‌ಯುವಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
PM Modi’s brother Prahlad Modi admitted to hospital in Chennai