ಏ.7ಕ್ಕೆ ವಿದ್ಯಾರ್ಥಿಗಳೊಂದಿಗೆ “ಮೋದಿ ಪರೀಕ್ಷಾ ಪೆ ಚರ್ಚಾ”
ನವದೆಹಲಿ : ಏಪ್ರಿಲ್ 7 ರಂದು ಪ್ರಧಾನಿ ನರೇಂದ್ರ ಮೋದಿ ಶಾಲಾ – ಕಾಲೇಜು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೆ ಚರ್ಚಾ ನಡೆಸಲಿದ್ದಾರೆ.
ಹೆಮ್ಮಾರಿ ಕೊರೊನಾ ಸೋಂಕಿನ ಕಾರಣದಿಂದಾಗಿ ಈ ಬಾರಿ ಪರೀಕ್ಷಾ ಪೆ ಚರ್ಚಾ ವರ್ಚುವಲ್ ಆಗಿ ನಡೆಯಲಿದೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ನಮ್ಮ ಕೆಚ್ಚೆದೆಯ ಪರೀಕ್ಷಾ ಯೋಧರು, ಪೋಷಕರು ಮತ್ತು ಶಿಕ್ಷಕರೊಂದಿಗೆ ವ್ಯಾಪಕ ವಿಷಯಗಳ ಕುರಿತು ಹಲವಾರು ಆಸಕ್ತಿದಾಯಕ ಪ್ರಶ್ನೆಗಳ ಜೊತೆಯಲ್ಲಿ ನಡೆಸುವ ಸ್ಮರಣೀಯ ಚರ್ಚೆ ಇದಾಗಿರಲಿದೆ.
ಏಪ್ರಿಲ್ 7 ರಂದು ಸಂಜೆ 7 ಗಂಟೆಗೆ ಕಾರ್ಯಕ್ರಮ ವೀಕ್ಷಿಸಿ ಎಂದು ಬರೆದುಕೊಂಡಿದ್ದಾರೆ.
