Sco Summit – ಭಾರತ ಮತ್ತು ಪಾಕ್ ಪ್ರಧಾನಿ ಸೆಪ್ಟಂಬರ್ ನಲ್ಲಿ ಭೇಟಿಯಾಗುವ ಸಾಧ್ಯತೆ..
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಸೆಪ್ಟೆಂಬರ್‌ನಲ್ಲಿ ಭೇಟಿಯಾಗಬಹುದಾದ ಸಾಧ್ಯತೆ ಇದೆ. ರಾಜತಾಂತ್ರಿಕ ಮೂಲಗಳ ಪ್ರಕಾರ, ಶಾಂಘೈ ಸಹಕಾರ ಸಂಸ್ಥೆ (SCO) ಸಮ್ಮೇಳನವು ಸೆಪ್ಟೆಂಬರ್ 15-16 ರಂದು ಉಜ್ಬೇಕಿಸ್ತಾನ್‌ನಲ್ಲಿ ನಡೆಯಲಿದೆ. ಈ ವೇಳೆ ಭಾರತ ಮತ್ತು ಪಾಕಿಸ್ತಾನದ ಪ್ರಧಾನಿಗಳು ಸೇರಿದಂತೆ ಚೀನಾ, ರಷ್ಯಾ ಮತ್ತು ಇರಾನ್ ಅಧ್ಯಕ್ಷರು ಸಹ ಪಾಲ್ಗೊಳ್ಳಲಿದ್ದಾರೆ. ಉಜ್ಬೇಕಿಸ್ತಾನ್‌ನ ಸಮರ್ಕಂಡ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಸಭೆಯಲ್ಲಿ ಉಭಯ ದೇಶಗಳ ಪ್ರಧಾನಿಗಳು ಭೇಟಿಯಾಗಬಹುದು ಎನ್ನಲಾಗಿದೆ.
ಔಪಚಾರಿಕ ಭೇಟಿ ಸಾಧ್ಯವಿಲ್ಲ
ಮೂಲಗಳ ಪ್ರಕಾರ, ಎರಡೂ ದೇಶಗಳ ನಡುವೆ ಯಾವುದೇ ಔಪಚಾರಿಕ ಭೇಟಿಯ ಸಾಧ್ಯತೆ ಕಡಿಮೆ ಇದೆ. ಪುಲ್ವಾಮಾ ದಾಳಿಯ ನಂತರ ಉಭಯ ದೇಶಗಳ ಪ್ರಧಾನಿಗಳ ನಡುವೆ ಯಾವುದೇ ಅಧಿಕೃತ ಸಭೆ ನಡೆದಿಲ್ಲ.
ಮಾಧ್ಯಮ ವರದಿಗಳ ಪ್ರಕಾರ, 6 ವರ್ಷಗಳಲ್ಲಿ ಎರಡೂ ದೇಶಗಳ ಪ್ರಧಾನಿಗಳು ಒಂದೇ ಸೂರಿನಡಿ ಹಾಜರಾಗುತ್ತಿರುವುದು ಇದೇ ಮೊದಲು. ಪ್ರಧಾನಿ ಮೋದಿ ಮತ್ತು ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರ ಈ ಸಭೆಯ ವಿಷಯಗಳೇನು ? ಉಭಯ ದೇಶಗಳ ನಡುವಿನ ಮಾತುಕತೆ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆಯೇ ಎನ್ನವುದರ ಕುರಿತು ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ.
ಪಾಕಿಸ್ತಾನದ ಪ್ರಧಾನಿಯಾಗಿ ಶಹಬಾಜ್ ಷರೀಫ್ ಅಧಿಕಾರ ಸ್ವೀಕರಿಸಿದಾಗ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದರು. ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿರುವ ಮಿಯಾನ್ ಮುಹಮ್ಮದ್ ಶಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಬರೆದಿದ್ದರು. ಭಾರತವು ಭಯೋತ್ಪಾದನೆ ಮುಕ್ತ ವಲಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ, ಇದರಿಂದ ನಾವು ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು. ಇದಕ್ಕೆ ಪ್ರತಿಕ್ರಿಯಿಸಿದ ಪಾಕ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದರು.