ಶಿರಾ : ಮೈತ್ರಿ ಸರ್ಕಾರದ ರಚನೆ ವೇಳೆ ಬಿಜೆಪಿಯವರೂ ನನ್ನನ್ನು ಮುಖ್ಯಮಂತ್ರಿ ಮಾಡಲೂ ಮುಂದಾಗಿದ್ದರು.
ಕೇಂದ್ರದಿಂದ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಹೇಳಿದ್ದಾರೆ.
ಶಿರಾ ಉಪಚುನಾವಣೆ ಹಿನ್ನೆಲೆ ಇಂದು ಶಿರಾ ನಗರದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರ ರಚನೆ ಮಾಡಲು ಹೊರಟಾಗ ಮೋದಿಯವರೇ ಮುಖ್ಯಮಂತ್ರಿಯಾಗಲು ನನಗೆ ಆಫರ್ ನೀಡಿದ್ದರು.
ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಆದರೆ ಕಾಂಗ್ರೆಸ್ಸಿನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಎಂದು ಹೇಳಿದರು.
ಇದೇ ವೇಳೆ ಶಿರಾದಲ್ಲೂ ಗೆದ್ದೇ ಗೆಲ್ತೇವೆ ಎಂಬ ಬಿ.ವೈ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ಲುತ್ತೇವೆ ಎಂದು ಬಂದಿದ್ದಾರೆ.
ಲೂಟಿ ಸರ್ಕಾರದವರು ಶಿರಾ ಗೆಲ್ಲಲು ಮುಂದಾಗಿದ್ದಾರೆ ಎಂದು ಟಾಂಗ್ ನೀಡಿದರು.
ಇದನ್ನೂ ಓದಿ : ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಅಪರಾಧಿಗಳನ್ನು ಶಿಕ್ಷೆಗೊಳಪಡಿಸಬೇಕು : ಸಿದ್ದರಾಮಯ್ಯ
ಕೆಲ ಕಾರಣಗಳಿಂದ ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಬಹಳ ವೇಗದಲ್ಲಿ ಹೊರಟಿದೆ. ಸಭೆ ಸಮಾರಂಭ ಮಾಡಿದೆ.
ಆದರೂ ಇದರಿಂದ ಕಾರ್ತಕರ್ತರು ಎದೆಗುಂದಬೇಕಿಲ್ಲ. ಈ ಕ್ಷೇತ್ರದ ಕಾಡುಗೊಲ್ಲರು ನನಗೆ ಸತ್ಕಾರ ನೀಡಿದ್ದಾರೆ.
ನಾನು ಗ್ರಾಮ ವಾಸ್ತವ್ಯ ಮಾಡಿದ್ದು ಕಾಡುಗೊಲ್ಲರ ಮನೆಯಲ್ಲಿ ಎಂದು ಹೇಳುವ ಮೂಲಕ ಕಾಡುಗೊಲ್ಲರ ಮತ ಸೆಳೆಯುವಲ್ಲಿ ಕುಮಾರಸ್ವಾಮಿ ಗಮನಹರಿಸಿದರು.