ಇಂದು ಮತ್ತೊಂದು ಹಿರಿಮೆಗೆ ಪಾತ್ರರಾದ ಮೋದಿ : ಈ ಪಟ್ಟಿಯಲ್ಲಿ ಜಾಗತಿಕವಾಗಿ ನಮೋಗೆ 3ನೇ ಸ್ಥಾನ
ನವದೆಹಲಿ : ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಅತ್ಯಂತ ಹೆಚ್ಚು ಟ್ವಿಟ್ಟರ್ ಫಾಲೋವರ್ಸ್ ಹೊಂದಿದ ನಾಯಕರಾಗಿರುವುದು ನಮಗೆಲ್ಲಾ ಗೊತ್ತೆ ಇದೆ. ಏತನ್ಮಧ್ಯೆ ಇಂದು ಅವರು ಮತ್ತೊಂದು ಹಿರಿಮೆಗೆ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿಯವರ ಟ್ವಿಟ್ಟರ್ ಫಾಲೋವರ್ಸ್ ಗಳ ಸಂಖ್ಯೆ ಇಂದು 60 ಮಿಲಿಯನ್ ದಾಟಿದೆ. ಇದರೊಂದಿಗೆ ಜಾಗತಿಕವಾಗಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ 3ನೇ ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಸದ್ಯ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಟ್ವಿಟ್ಟರ್ ನಲ್ಲಿ 120 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಈ ಮೂಲಕ ಜಾಗತಿಕವಾಗಿ ಅತೀ
ಹೆಚ್ಚು ಟ್ವಿಟ್ಟರ್ ಫಾಲೋವರ್ಸ್ ಹೊಂದಿರುವವರಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಅಮೆರಿಕಾದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 83 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಹೊಂದಿದ್ದು 2ನೇ ಸ್ಥಾನದಲ್ಲಿ ಇದ್ದಾರೆ.








