ನಾವಿಂದು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ ಎಂದರೆ ಇದರ ಹಿಂದೆ ಲಕ್ಷಾಂತರ ಜನರ ತ್ಯಾಗವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿರುವ ಅವರು ನಮ್ಮ ಸೇನೆ ಭಾರತ ಮಾತೆಯನ್ನು ರಕ್ಷಿಸುತ್ತಿದೆ. ವೀರರ ತ್ಯಾಗ ಬಲಿದಾನದಿಂದಾಗಿ ನಾವಿಂದು ಸಂಭ್ರಮ ಪಡುತ್ತಿದ್ದೇವೆ.
ಇದೇ ವೇಳೆ ಕೊರೊನಾ ವಾರಿಯರ್ಸ್ ಸುದೀರ್ಘ ಸಮಯದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದ ಧರ್ಮ ಎಂಬಂತೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕೊರೊನಾ ಸಂಕಷ್ಟದ ಸಮಯಯದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಕಾರ್ಯಯನ್ನು ಶ್ಲಾಘಿಸಿದರು.
ಅಲ್ಲದೇ ಕರೊನಾಗೆ ಯಾವುದೇ ಭಯಪಡುವ ಅಗತ್ಯವಿಲ್ಲ. ಕರೊನಾಗೆ ಭಾರತದಲ್ಲೇ ಲಸಿಕೆ ಸಿದ್ಧವಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ಲಸಿಕೆಗಳು ತಯಾರಾಗುತ್ತಿವೆ. ಲ್ಯಾಬ್ಗಳಲ್ಲಿ ಋಷಿಮುನಿಗಳ ರೀತಿಯಲ್ಲಿ ಸಂಶೋಧನೆ ನಡೆಯುತ್ತಿದೆ. ಶೀಘ್ರದಲ್ಲೇ ಜನರ ಕೈಗೆ ಕರೊನಾ ಔಷಧಿ ಸಿಗಲಿದೆ ಎಂದು ಧೈರ್ಯ ತುಂಬಿದರು.








