ಪ್ರಧಾನಿ ಮೋದಿ ಜಮ್ಮು&ಕಾಶ್ಮೀರಕ್ಕೆ ಭೇಟಿ | 20 ಸಾವೀರ ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ
ಶ್ರೀನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಭಾನುವಾರ) ಜಮ್ಮು&ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಈ ವೇಳೆ 20 ಸಾವೀರ ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಾಳೆ ಪಂಚಾಯತ್ ರಾಜ್ ದಿವಸ್ ಅಂಗವಾಗಿ ಪ್ರಧಾನಿಯರವು ಪಂಚಾಯತ್ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ವರ್ಷ ಏಪ್ರಿಲ್ 24 ಅನ್ನು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಪ್ರಧಾನಮಂತ್ರಿ ಮೋದಿ ಜಮ್ಮು ಮತ್ತು ಕಾಶ್ಮೀರದ 30,000ಕ್ಕೂ ಹೆಚ್ಚು ಪಂಚಾಯತ್ ರಾಜ್ ಸಂಸ್ಥೆ ಸದ್ಯಸ್ಯರನ್ನು ಒಳಗೊಂಡಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಜಮ್ಮುವಿನ ಪಂಚಾಯತ್ ಪಲ್ಲಿಯನ್ನು ಈ ವರ್ಷ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ರೈತರು, ಸರಪಂಚ್ ಗಳು ಮತ್ತು ಗ್ರಾಮದ ಮುಖ್ಯಸ್ಥರು ತಮ್ಮ ಆದಾಯ ಮತ್ತು ಅವರ ಉತ್ಪನ್ನಗಳನ್ನು ಸುಧಾರಿಸಲು ಅನುವು ಮಾಡಿಕೊಡುವ ಇತ್ತೀಚಿನ ಆವಿಷ್ಕಾರಗಳನ್ನು ಪ್ರದರ್ಶಿಸಲಾಗುತ್ತದೆ.
ನಾಳೆ ಪ್ರದರ್ಶಿಸಲು ಯೋಜಿಸಲಾದ ಪ್ರಮುಖ ಆವಿಷ್ಕಾರಗಳ ಪೈಕಿ ಗ್ರಾಮೀಣಾಭಿವೃದ್ಧಿ ಮತ್ತು ರೈತರಿಗೆ ಭೂಗೋಳದ ತಂತ್ರಜ್ಞಾನ, ಐದು ದಿನಗಳವರಗೆ ಹವಾಮಾನ ಮುನ್ಸೂಚನೆಗಾಗಿ ರೈತರು ಬಸಳಬಹುದಾದ ಅಪ್ಲಿಕೇಶನ್ ಗಳು, ನೇರಳೆ ಕ್ರಾಂತಿ ಎಂದು ಪ್ರಸಿದ್ಧವಾದ ಲ್ಯಾವೆಂಡರ್ ಕೃಷಿ, ಅದೇ ಭೂಮಿಯಲ್ಲಿ ಸೇಬಿನ ಉತ್ಪಾದನೆಯನ್ನು ಹೆಚ್ಚಿಸಲು ಜೈವಿಕ ತಂತ್ರಜ್ಞಾನದ ಆವಿಷ್ಕಾರಗಳು.
ಅಲ್ಲದೇ ರೈತರ ಆದಯವನ್ನು ಹೆಚ್ಚಿಸಲು, ಕೀಟನಾಶಕ ಸಿಂಪಡಣೆ ಮತ್ತು ತ್ಯಾಜ್ಯ ಸಂಸ್ಕರಣೆಗೆ ಡ್ರೋನ್ ಅಪ್ಲಿಕೇಶನ್ ಮತ್ತು ಪರಮಾಣು ವಿಕಿರಣದ ಮೂಲಕ ಹಣ್ಣುಗಳ ಶೆಲ್ಫ್ ಜೀವಿತಾವಧಿಯನ್ನು ಹೆಚ್ಚಿಸುವುದು ಇತ್ಯಾದಿಗಳು ಸೇರಿವೆ.