ನವದೆಹಲಿ: ಮುನ್ನೆಚ್ಚರಿಕಾ ಕ್ರಮಗಳ ಹೊರೆತಾಗಿ ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಎರಡನೇ ಹಂತದ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಈ ವೇಳೆ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ನಿಭಾಯಿಸುವ ಮತ್ತು ನಿಯಂತ್ರಣಕ್ಕೆ ತರುವ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.
ಇನ್ನು ಮಾರ್ಚ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲಾ ರಾಜ್ಯದ ಸಿಎಂ ಮೊದಲ ಸುತ್ತಿನ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಈ ವೇಳೆ ಕೊರೊನಾವನ್ನು ಮಟ್ಟಹಾಕುವಂತೆ ಆಯಾ ರಾಜ್ಯದ ಸಿಎಂಗಳ ಬಳಿ ಮನವಿ ಮಾಡಿದ್ದರು. ಇಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿಎಂ, ಆರೋಗ್ಯ ಸಚಿವರು ಸೇರಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ.








