ಶಿವಮೊಗ್ಗ: ಇಂದು ಬೆಳಗ್ಗೆ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅಲ್ಲಿಂದ ನೇರವಾಗಿ ಶಿವಮೊಗ್ಗದ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ರಾಮಚಂದ್ರಾಪುರ ಮಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಕೃಷ್ಣಾರ್ಪಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜಶೋದಾ ಬೆನ್ ಅವರು ಇಲ್ಲಿಗೆ ಭೇಟಿ ನೀಡಿದ್ದರು. ಮಠಕ್ಕೆ ಆಗಮಿಸಿದ ಜಶೋದಾ ಬೆನ್ ಮೋದಿ ನೇರವಾಗಿ ಗೋವರ್ಧನಗಿರಿಗೆ ತೆರಳಿ ಗೋಪಾಲಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು. ಬಳಿಕ ಕೃಷ್ಣಾರ್ಪಣ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, “ಶ್ರೀರಾಘವೇಶ್ವರ ಸ್ವಾಮೀಜಿಯಲ್ಲಿ ನಾನು ಆದಿ ಶಂಕರಾಚಾರ್ಯರನ್ನು ಕಂಡೆ” ಎನ್ನುತ್ತಾ ಶಂಕರಾಚಾರ್ಯರ ಕಾಲಿಗೆ ಮೊಸಳೆ ಕಚ್ಚಿದ ಕಥೆಯನ್ನು ನೆನಪಿಸಿಕೊಂಡರು.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








