ಇಂದು ಬೆಳಗ್ಗೆ ಬೆಂಗಳೂರಿನ ರಾಜಾನುಕುಂಟೆಯ ವೇಣುಗೋಪಾಲ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅವರು ಭೇಟಿ ನೀಡಿದ್ದರು. ದೇವಾಲಯಕ್ಕೆ ಅವರು ಆಗಮಿಸುತ್ತಿದ್ದಂತೆ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಅವರನ್ನು ಸ್ವಾಗತಿಸಿದರು. ಇಲ್ಲಿ ವೇಣುಗೋಪಾಲಸ್ವಾಮಿಯ ದರ್ಶನ ಪಡೆದ ಜಶೋದಾ ಬೆನ್ ಅವರು ಬಳಿಕ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ರು.
ಇನ್ನು ಮೊನ್ನೆ ಜಶೋದಾ ಬೆನ್ ಅವರು ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದರು.








