ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ (POCSO case)ಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ಕೋರ್ಟ್ ಗೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 73 ಸಾಕ್ಷಿಗಳ ಪರಿಗಣಿಸಿ ದೋಷಾರೋಪ ಪಟ್ಟಿಯನ್ನು ಅಧಿಕಾರಿಗಳು ತಯಾರಿಸಿದ್ದಾರೆ. ಯಡಿಯೂರಪ್ಪ, ಅರುಣ್, ರುದ್ರೇಶ್ ಹಾಗೂ ಮರಿಸ್ವಾಮಿ ಎಂಬುವವರ ವಿರುದ್ಧ ಸಿಐಡಿ ಅಧಿಕಾರಿಗಳು 1ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿತ್ತು. ತನಿಖೆಗೆ ಹಾಜರಾಗುವಂತೆ ಬಿಎಸ್ವೈಗೆ ನೋಟಿಸ್ ನೀಡಲಾಗಿತ್ತು. ಆದರೆ, ಅವರುಕ ಕಾಲಾವಕಾಶ ಕೇಳಿದ್ದರು. ನಂತರ ತನಿಖೆಗೆ ಹಾಜರಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು, ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿತ್ತು. ಆದರೆ, ಕೋರ್ಟ್ ನಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಆನಂತರ ಯಡಿಯೂರಪ್ಪ ಅವರು ತನಿಖೆಗೆ ಹಾಜರಾಗಿದ್ದರು.