ಕವಿ, ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ – ಸಿ ಎಂ ಬೊಮ್ಮಾಯಿ.
ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ, ನಾಡೋಜ ಡಾ. ಚನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಲು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೇಟಿ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಶೀಘ್ರ ಗುಣಮುಖರಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅವರ ಆರೋಗ್ಯ ಸ್ಥಿತಿಗತಿ ಕುರಿತು ವೈದ್ಯರೊಂದಿಗೆ ಚರ್ಚಿಸಲಾಗಿದೆ ಎಂದ ಅವರು, ತಮ್ಮ ಅನನ್ಯ ಸಾಹಿತ್ಯದ ಮೂಲಕ ನಾಡಿನ ಸಾಂಸ್ಕೃತಿಕ ಲೋಕವನ್ನು ಪ್ರಭಾವಿಸಿರುವ ಚನ್ನವೀರ ಕಣವಿ ಅವರ ಶೀಘ್ರ ಚೇತರಿಕೆಗೆ ಆಶಿಸುವುದಾಗಿ ತಿಳಿಸಿದರು. ಈ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.
ಕಳೆದ ಒಂದು ತಿಂಗಳ ಹಿಂದೆ ನ್ಯುಮೋನಿಯಾ ಖಾಯಿಲೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆರ್‌ಟಿಪಿಸಿಆರ್ ತಪಾಸಣೆಯಿಂದ ಕಣವಿ ಅವರಿಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿತ್ತು.