Pogaru
ಆಕ್ಷನ್ ಫಿನ್ಸ್ ‘ಪೊಗರು’ ಹಿಂದಿ ಡಬ್ಬಿಂಗ್ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟ..!
ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ , ಆಕ್ಷನ್ ಪ್ರಿನ್ಸ ಧ್ರುವ ಸರ್ಜಾ ಅಭಿನಯದ ‘ಪೊಗರು’ ಸಿನಿಮಾದ ಚಿತ್ರೀಕರಣ ಇತ್ತೀಚಿಗಷ್ಟೆ ಕಂಪ್ಲೀಟ್ ಆಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಯಾವಾಗ ಸಿನಿಮಾ ರಿಲೀಸ್ ಆಗಲಿದೆ ಎಂದು ಅಭಿಮಾನಿಗಳು ಎದುರು ನೋಡ್ತಿರೋವಾಗ್ಲೇ ಕನ್ನಡಾಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಅದೇಂದ್ರೆ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿರುವ ಈ ಸಿನಿಮಾ ಹಿಂದಿ ಡಬ್ಬಿಂಗ್ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟವಾಗಿದೆಯಂತೆ.
ಹೌದು ಪೊಗರು ಸಿನಿಮಾದ ಡಬ್ಬಿಂಗ್ ರೈಟ್ಸ್ ಗೆ ಹಿಂದಿಯಲ್ಲಿ ಭಾರೀ ಡಿಮ್ಯಾಂಡ್ ಬಂದಿದ್ದು, ಕೋಟ್ಯಾಂತರ ರೂಪಾಯಿಗಳಿಗೆ ಹಿಂದಿ ಡಬ್ಬಿಂಗ್ ಹಕ್ಕನ್ನು ಮಾರಾಟ ಮಾಡಲಾಗಿದೆ ಎಂಬ ಸುದ್ದಿ ಇದೀಗ ಹರಿದಾಡ್ತಿದೆ. ಅಂದ್ಹಾಗೆ ಪೊಗರು ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ ಅನ್ನ ಬಾಲಿವುಡ್ ನ ನಿರ್ಮಾಪಕರಾದ ಆರೆ ಕೆ ದಗ್ಗಲ್ ಭಾರೀ ಮೊತ್ತಕ್ಕೆ ಖರೀದಿ ಮಾಡಿದ್ದಾರೆ ಎಂಬ ಸುದ್ದಿ ಸದ್ಯ ಸ್ಯಾಂಡಲ್ ವುಡ್ ಅಂಗಳದಲ್ಲಿ ಹಲ್ ಚಲ್ ಸೃಷ್ಟಿಸಿದೆ.
ಇನ್ನೂ ಮೂಲಗಳ ಪ್ರಕಾರ ಸಿನಿಮಾದ ಡಬ್ಬಿಂಗ್ ರೈಟ್ಸ್ ಬರೋಬ್ಬರಿ 7.2 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆದ್ರೆ ಈವರೆಗೂ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.
ಇನ್ನೂ ಇತ್ತೇಚೆಗಿನ ಅಪ್ ಡೇಟ್ಸ್ ಪ್ರಕಾರ ಪೊಗರು ಸಿನಿಮಾ ಡಿಸೆಂಬರ್ 25 ಅಂದ್ರೆ ಕ್ರಿಸ್ ಮಸ್ ಗೆ ರಿಲೀಸ್ ಆಗಲಿದೆ ಎನ್ನಲಾಗಿದೆ. ಅದು ಆಗದೇ ಹೋದ ಪಕ್ಷದಲ್ಲಿ ಮುಂದಿನ ವರ್ಷ ಜನವರಿಯಲ್ಲಿ ಸಂಕ್ರಾಂತಿ ವೇಳೆಗೆ ಸಿನಿಮಾ ರಿಲೀಸ್ ಗೆ ಪೊಗರು ಟೀಂ ಪ್ಲಾನ್ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಂದ್ಹಾಗೆ ನಂದಕಿಶೋರ್ ಸಾರಥ್ಯದಲ್ಲಿ ಮೂಡಿಬಂದಿರುವ ಚಿತ್ರದಲ್ಲಿ ಧ್ರುವಾ ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಮಡಿದ್ದಾರೆ. ವಿಶೇಷ ಎಂದರೆ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಇನ್ನೂ ಪೊಗರು ನಂತರ ಧ್ರುವ ಸರ್ಜಾ ಹಾಗೂ ನಂದಕಿಶೋರ್ ಕಾಂಬಿನೇಶನ್ ನಲ್ಲಿ ಮತ್ತೊಂದು ಹೈ ವೋಲ್ಟೇಜ್ ಸಿನಿಮಾ ಬರುತ್ತಿದೆ. ದುಬಾರಿ ಎಂಬ ಟೈಟಲ್ ಫಿಕ್ಸ್ ಆಗಿದ್ದು, ಮುಹೂರ್ತ ಕೂಡ ನೆರವೇರಿದೆ.
ಬಡವರ ರಿಯಲ್ ಹೀರೋ ಸೋನು ಸೂದ್ ಹೆಸರಲ್ಲಿ ನಡೆಯುತ್ತಿದೆ ಮಹಾವಂಚನೆ : ಹುಷಾರಾಗಿರಿ ಎಂದ ನಟ..!
Pogaru
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








