ವಿಷಯುಕ್ತ ಆಹಾರ ಸೇವನೆ : ಒಂದೇ ಕುಟುಂಬದ ಮೂವರು ಸಾವು Chitradurga
ಚಿತ್ರದುರ್ಗ : ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.
ತಿಪ್ಪಾನಾಯ್ಕ್, ಪತ್ನಿ ಸುಧಾಬಾಯಿ, 75 ವರ್ಷದ ವೃದ್ಧೆ ಗುಂಡಿಬಾಯಿ ಮೃತರಾಗಿದ್ದಾರೆ. ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇವರು ನಿನ್ನೆ ರಾತ್ರಿ ರಾಗಿ ಮುದ್ದೆ, ಕಾಳು ಸಾಂಬರ್ ಸೇವನೆ ಬಳಿಕ ಅಸ್ವಸ್ಥರಾಗಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೂವರು ಕೊನೆಯುಸಿರೆಳೆದಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇನ್ನು ಈ ಸಂಬಂಧ ಭರಮಸಾಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.