ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪ್ರೇಮಿಗಳನ್ನು ಬಂಧಿಸಿದ ಪೊಲೀಸರು – Saaksha Tv
ಬೆಂಗಳೂರು: ಕೇರಳ ಮೂಲದ ಡ್ರಗ್ಸ್ ಪೆಡ್ಲರ್ ಪ್ರೇಮಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರು ಪ್ರೇಮಿಗಳಾಗಿದ್ದು, ವಿದ್ಯಾಭ್ಯಾಸಕ್ಕಾಗಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಇವರು ತಮ್ಮ ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ವ್ಯಾಪಾರಾ ಮಾಡುತ್ತಿದ್ದರಿಂದ ಬೆಂಗಳೂರಿನ ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.
ಸಿಗಿಲ್ ವರ್ಗಿಸ್ ಮತ್ತು ವಿಷ್ಟುಪ್ರಿಯ ಡ್ರಗ್ಸ್ ಸೇವನೆ ಚಟಕ್ಕೆ ಬಿದ್ದಿದ್ದಾರೆ. ನಂತರ ಪ್ರೇಮಿಗಳು ಐಷಾರಾಮಿ ಜೀವನ ನಡೆಸಲು ಪೆಡ್ಲಿಂಗ್ ನಡೆಸಲು ಶುರುಮಾಡಿದ್ದಾರೆ. ಇವರು ಕೇರಳ ಮತ್ತು ತಮಿಳುನಾಡಿನ ಕೊಯಮತ್ತೂರಿನಿಂದ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಈ ದಂಧೆಯ ಅಧಿಕೃತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 8 ಕೋಟಿ ರೂ. ಮೌಲ್ಯದ ವಿವಿಧ ರೀತಿಯ ಡ್ರಗ್ಸ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.









