ಹಿಟ್ ಆಂಡ್ ರನ್ ಆರೋಪಿಯನ್ನು ಬಂಧಿಸಿದ ಪೊಲೀಸರು – Saaksha Tv
ಹುಬ್ಬಳ್ಳಿ: ಮಹಿಳಿಗೆ ಕಾರು ಗುದ್ದಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೇಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಕಳೆದ ಎರಡು ದಿನಗಳ ಹಿಂದೆ ಸ್ಕೂಟಿಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದ. ಕಾರು ಗುದ್ದಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ನಿರ್ಮಲಾದೇವಿ ಜೈನ್ ಎಂಬ ವೃದ್ಧೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು.
ಘಟನೆಯ ನಂತರ ಶಾಂತಿನಗರದ ಕಾರು ಚಾಲಕ ರಾಜೇಶ ಎಂಬಾತ ನವಲಗುಂದ ತಾಲೂಕಿನ ತೀರ್ಲಾಪುರ ಗ್ರಾಮದಲ್ಲಿ ಕಾರನ್ನು ನಿಲ್ಲಿಸಿ ಬೆಂಗಳೂರಿಗೆ ಪರಾರಿಯಾಗಿದ್ದ.
ಖಚಿತ ಮಾಹಿತಿಯನ್ನ ಕಲೆ ಹಾಕಿದ ಕೇಶ್ವಾಪುರದಲ್ಲಿ ದಕ್ಷಿಣ ಸಂಚಾರಿ ಠಾಣೆ ಪೊಲೀಸರು, ಆರೋಪಿ ರಾಜೇಶನನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದು, ಕಾರನ್ನ ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ.









