Bengaluru: ಯುಪಿಯಿಂದ ಕಳ್ಳತನಕ್ಕೆಂದು ರಾಜ್ಯಕ್ಕೆ ಬಂದಿದ್ದ ಕಳ್ಳರ ಬಂಧನ

1 min read
Thief arrested Saaksha Tv

ಯುಪಿಯಿಂದ ಕಳ್ಳತನಕ್ಕೆಂದು ರಾಜ್ಯಕ್ಕೆ ಬಂದಿದ್ದ ಕಳ್ಳರ ಬಂಧನ

ಬೆಂಗಳೂರು: ಕಳ್ಳತನಕ್ಕೆಂದು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ, ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ಅಕ್ಬರ್(36) ಮತ್ತು ಶಾದಬ್ ಖಾನ್ ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳಿಂದ ಕಳ್ಳತನದಲ್ಲಿ ತೊಡಗಿಕೊಂಡಿದ್ದು, ಸಧ್ಯ ಇವರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Yalahanka Police Saaksha Tv

ಬಂಧಿತ ಆರೋಪಿ ಅಕ್ಬರ್ ಹಲವು ವರ್ಷಗಳಿಂದ ಕಳ್ಳತನದ ಕೃತ್ಯಗಳಲ್ಲಿ ತೊಡಗಿದ್ದನು. ಮಹಾರಾಷ್ಟ್ರದ ಅಂಧೇರಿಯಲ್ಲಿ ವಾಸವಾಗಿದ್ದ ಈತ ಆಟೋರಿಕ್ಷಾ ಚಾಲನೆ ಮಾಡುತ್ತಿದ್ದ. ಜೊತೆಗೆ ಮಹಾರಾಷ್ಟ್ರದಲ್ಲಿ ಹಲವು ಕಳ್ಳತನದ ಪ್ರಕರಣದಲ್ಲಿ ಭಾಗಿಯಾಗಿದ್ದನು. 2004 ರಿಂದ ಇಲ್ಲಿಯವರೆಗೂ ಒಟ್ಟು 8 ಬಾರಿ ಜೈಲು ಪಾಲಾಗಿದ್ದನು. ಎಂದು ಪೊಲೀಸರು ತಿಳಿಸಿದ್ದಾರೆ.

ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ 400 ಗ್ರಾಂ ಚಿನ್ನ , 2 ಲಕ್ಷ ನಗದು ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಾದ ಅಕ್ಬರ್ ಮತ್ತು ಶಾದಬ್ ಖಾನ್ ನ್ನು ಪೊಲೀಸರು ಬಂಧಿಸಿದ್ದು, ಸದ್ಯ ಬಂಧಿತ ಆರೋಪಿಗಳಿಂದ 7 ಲಕ್ಷ ರೂಪಾಯಿ ಮೌಲ್ಯದ 180 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd