Tumkur | ಜೂಜುಕೋರರಿಗೆ ಖಾಕಿ ಶಾಕ್
ತುಮಕೂರು : ಜೂಜುಕೋರರಿಗೆ ಮಧುಗಿರಿ ಡಿವೈಎಸ್ ಪಿ ರಾಮಕೃಷ್ಣ ನೇತೃತ್ವದಲ್ಲಿ ಪೊಲೀಸರು ಶಾಕ್ ನೀಡಿದ್ದಾರೆ.
ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದ ಹೊರವಲಯದ ಸಿ.ಜೆ.ಎಲೈಟ್ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಲ್ಲದೆ 7,00,650ರೂ ನಗದು ಹಾಗೂ ಮೂರು ಕಾರು,ಮೂರು ಮೊಬೈಲ್ ಜಪ್ತಿ ಮಾಡಿದ್ದಾರೆ.
ಇನ್ನು ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








