ಕೋಲಾರ: ಬ್ಯಾರಿಕೇಡ್ ಗೆ ಪೊಲೀಸ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಾಗಿದ್ದ ಪೊಲೀಸ್ ಪೇದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಮಾರಿಕುಪ್ಪಂ ಹತ್ತಿರ ಮೂರು ದಿನಗಳ ಹಿಂದೆಯೇ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಪೇದೆ ಸಾವನ್ನಪ್ಪಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಕೆಜಿಎಫ್ ಡಿಎಆರ್ ಪೊಲೀಸ್ ಪೇದೆ ಚಿರಂಜೀವಿ (37) ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಂಡರ್‌ಸನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿ ಅಂತಿಮ ದರ್ಶನ ಪಡೆದು ವಿದಾಯ ಹೇಳಿದ್ದಾರೆ.








