ನಟಿ ಕಂಗನಾ ವಿರುದ್ಧ ಪೊಲೀಸ್ ಕೇಸ್

1 min read
Kangana response to trolls

ನಟಿ ಕಂಗನಾ ವಿರುದ್ಧ ಪೊಲೀಸ್ ಕೇಸ್ Kangana saaksha tv

ಮುಂಬೈ : ಸಾಮಾಜಿಕ ಜಾಲತಾಣಗಳಲ್ಲಿ ಸಿಖ್ಖರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.

ದೆಹಲಿಯ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯು ಉಪನಗರ ಖಾರ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪೊಲೀಸರು ಸೋಮವಾರ ಎಫ್‍ಐಆರ್ ದಾಖಲಿಸಿದ್ದಾರೆ.

ಕಂಗನಾ ರೈತ ಚಳವಳಿಯನ್ನು ಉದ್ದೇಶಪೂರ್ವಕವಾಗಿ ‘ಖಲಿಸ್ತಾನ’ ಚಳವಳಿ ಎಂದಿದ್ದಾರೆ.

Kangana saaksha tv

ಸಿಖ್ಖರನ್ನು ಖಲಿಸ್ತಾನಿ ಭಯೋತ್ಪಾದಕರು ಎಂದು ಟೀಕಿಸಿದ್ದಾರೆ ಎಂದು ದೂರಿನಲ್ಲಿ ಸಮಿತಿಯ ಸದಸ್ಯರು ಆರೋಪಿಸಿದ್ದಾರೆ.

ಇತ್ತ ಬೆಂಗಳೂರಿನಲ್ಲೂ ಕಂಗನಾ ರಣಾವತ್ ವಿರುದ್ಧ ದೂರು ದಾಖಲಾಗಿದೆ.

ಸ್ವಾತಂತ್ರ್ಯ ಸೇನಾನಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ದೇಶ ದ್ರೋಹ ಪ್ರಕರಣದಡಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಬೆಂಗಳೂರು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd