ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್ 6 ನ್ಯೂಸ್ @ 5 PM

admin by admin
September 13, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

February 16, 2026
What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

February 16, 2026

ಕಾರ್ಮಿಕರ ಮಕ್ಕಳಿಗೆ ಪಾಠ ಮಾಡ್ತಾರೆ ಈ ಪೊಲೀಸ್

ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಪ್ಪ ಜಡೆಮ್ಮನವರ್ ಸದ್ಯ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಇವರು ಡ್ಯೂಟಿಗೆ ಹೋಗುವ ಮುನ್ನ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಶಾಂತಪ್ಪ ಅವರು ಪ್ರತಿದಿನ ಬೆಳಗ್ಗೆ 7 ಗಂಟೆಗೆ ಕರ್ತವ್ಯಕ್ಕೆ ತೆರಳುತ್ತಾರೆ. ಆದ್ರೆ ಇದಕ್ಕೂ ಮೊದಲು ಅವರು ಪಶ್ಚಿಮ ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಿರುವ ಕಾರ್ಮಿಕರ ಮಕ್ಕಳಿಗೆ ಪಾಠ ಮಾಡುತ್ತಾರೆ. ಸುಮಾರು 30 ಮಕ್ಕಳಿಗೆ ಒಂದು ಗಂಟೆ ಪಾಠ ಮಾಡುತ್ತಾರೆ. ಶಾಲೆಯ ಪಠ್ಯಕ್ಕೆ ಅನುಗುಣವಾಗಿ ಪಾಠ ಮಾಡಲು ಸಾಧ್ಯವಾಗದೇ ಇರುವ ಕಾರಣ, ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಗಣಿತದ ಬಗ್ಗೆ ಪಾಠವನ್ನು ಮಾಡುತ್ತಿದ್ದಾರೆ.

ಸೆ. 16ರಿಂದ ಮಾದಪ್ಪನ ದರ್ಶಕ್ಕಿಲ್ಲ ಅವಕಾಶ..!

ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದ ವಾರ್ಷಿಕ ಜಾತ್ರೆಯನ್ನು ರದ್ದು ಮಾಡುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 17 ರಂದು ಅಮವಾಸ್ಯೆ ಇರುವುದರಿಂದ   ಮಲೆ ಮಹಾದೇಶ್ವರ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ ಕೊರೊನಾ ಆತಂಕದ ನಡುವೆ ಹೆಚ್ಚಾಗಿ ಭಕ್ತರ ಆಗಮನದಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿಯೇ ಮುನ್ನೆಚಚ್ಚರಿಕಾ ಕ್ರಮವಾಗಿ ಮಹದೇಶ್ವರಸ್ವಾಮಿಯ ದರ್ಶನಕ್ಕೆ ಭಕ್ತರ ಪ್ರವೇಶಕ್ಕೆ  ಬ್ರೇಕ್ ಹಾಕಲಾಗಿದೆ.

https://youtu.be/fe-67D72-qs

ಸಿದ್ದರಾಮಯ್ಯ ಡ್ರಗ್ಸ್ ಮಾಫಿಯಾ ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ: ಕಾರಜೋಳ

ಸರ್ಕಾರ ಅತಿವೃಷ್ಠಿ ಪರಿಸ್ಥಿತಿ ಮುಚ್ಚಿ ಹಾಕಲು, ಕೋವಿಡ್ ವೈಫಲ್ಯ ಮರೆಮಾಚಲು ಡ್ರಗ್ಸ್ ತನಿಖೆ ವರದಿ ಸೋರಿಕೆ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಗೋವಿಂದ ಕಾರಜೋಳ ಚಿತ್ರದುರ್ಗದಲ್ಲಿ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ತನಿಖಾ ಹಾದಿ ತಪ್ಪಿಸುವ ಉದ್ದೇಶದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗಲೇಬೇಕು. ಸರ್ಕಾರ ಕೋವಿಡ್ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಿದ ಕಾರಣಕ್ಕೆ ವೈರಸ್ ನಿಯಂತ್ರಣದಲ್ಲಿದೆ. ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಟಾಂಗ್ ನೀಡಿದ್ದಾರೆ.

ಪ್ರಶಾಂತ್ ಸಂಬರಗಿ ಬಿಜೆಪಿ ಜೊತೆಯಲ್ಲಿ ಇಲ್ವಾ : ಸಿದ್ದರಾಮಯ್ಯ

ಪ್ರಶಾಂತ್ ಸಂಬರಗಿ ಬಿಜೆಪಿ ಜೊತೆಯಲ್ಲಿ ಇಲ್ವಾ? ಹಾಗಂತ ನಾವು ಏನಾದ್ರೂ ಆರೋಪ ಮಾಡಿದ್ದೀವಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಡ್ರಗ್ ಮಾಫಿಯಾದಲ್ಲಿ ಜಮೀರ್ ಕೇಳಿ ಬರುತ್ತಿರುವ ಹಿನ್ನೆಲೆ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕ್ಯಾಸಿನೋಗೆ ಯಾರದೋ ಜೊತೆ ಹೋದರು ಅನ್ನೋದು ತಪ್ಪಲ್ಲ. ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ರೆ ತಪ್ಪು. ಮಾಜಿ ಸಿಎಂ ಕುಮಾರಸ್ವಾಮಿ, ಶಾಸಕ ಜಮೀರ್ ಅಹ್ಮದ್ ಕ್ಯಾಸಿನೋಗೆ ಹೋಗಿರುವದನ್ನ ಒಪ್ಪಿಕೊಂಡಿದ್ದಾರೆ. ಈ ವಿಷಯದ ಕುರಿತು ನಾನು ಹೆಚ್ಚು ಮಾತನಾಡಲ್ಲ. ಬೇಕಿದ್ರೆ ಅವರನ್ನೇ ನೀವು ಕೇಳಬೇಕು. ನಾನು ವಿದೇಶಕ್ಕೆ ಹೋದಾಗ ಕ್ಯಾಸಿನೋ ಆಡುವ ಜಾಗವನ್ನ ನೋಡಿದ್ದೇನೆ. ಆದ್ರೆ ಅಲ್ಲಿ ಆಡಿಲ್ಲ. ಜಮೀರ್ ಕೊಲಂಬೋಗೆ ಹೋಗಿದ್ದು ಅಪರಾಧವಲ್ಲ ಎಂದು ಹೇಳಿದರು.

ವ್ಯಸನಗಳಿಂದ ಯುವಕರು ಯೌವನ ಕಳೆದುಕೊಳ್ಳತ್ತಿರುವುದು ವಿಷಾದನೀಯ: ಹಿರೇಮಠ ಶ್ರೀ

ವ್ಯಸನಗಳಿಂದ ಯುವಕರು ಯೌವನ ಕಳೆದುಕೊಳ್ಳತ್ತಿರುವುದು ವಿಷಾದನೀಯ ಎಂದು ತುಮಕೂರಿನ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ಡ್ರಗ್ ಮಾಫಿಯಾ ಬಗ್ಗೆ ಮಾತನಾಡಿದ್ದಾರೆ.  ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹಳೆನಿಜಗಲ್ಲಿನ ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ, ಕೆರೆಗೆ ಬಾಗಿನ ಸಮರ್ಪಿಸಿದ ಹಿರೇಮಠದ ಶ್ರೀಗಳು, ನಂತರ ಡ್ರಗ್ ಮಾಫಿಯಾ ಬಗ್ಗೆ ಮಾತನಾಡಿದರು. ಮಾದಕ ವ್ಯಸನಗಳಿಗೆ ಯುವಕರು ದಾಸರಾಗಬಾರದು. ಆಧುನಿಕ ಸಮಾಜದಲ್ಲಿ ತಂತ್ರಜ್ಞಾನ ಬೆಳೆದಿದೆ. ಎಲ್ಲವೂ ಅನ್ ಲೈನ್ ಕಾಲ ಎಂಬಾAತಾಗಿದೆ. ಯುವಕರು ತಮ್ಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ಅಂದಿನ ಯುವಕರು ಸುಶಿಕ್ಷತರಿರುತ್ತಿರಲಿಲ್ಲ. ಇಂದು ಯವಕರು ಸುಶಿಕ್ಷತರಾಗಿದ್ದಾರೆ. ಆದರೆ ಯುವಕರು ಸಾಮಾಜಿಕ ಜಾಲತಾಣದಿಂದ ಕೆಟ್ಟಿಲ್ಲ. ಪ್ರಕೃತಿಯನ್ನು ನೋಡಿ ಯುವಕರು ಕಲಿಯಬೇಕು. ವಿವೇಚನೆ ಬಳಸಬೇಕು. ಯುವಕರು ವಿವೇಚನೆ ಗಳಿಸಬೇಕು ಎಂದು ತಿಳಿಸಿದರು.

ಇನ್ನೊಂದು ವಾರ ರಾಜ್ಯದಲ್ಲಿ ಭಾರಿ ಮಳೆ

 ಇನ್ನೊಂದು ವಾರ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಲೇ ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಸಿದ್ದಪುರದಲ್ಲಿ 11 ಸೆಂ.ಮೀ, ಕುಂದಾಪುರ 10 ಸೆಂ.ಮೀ ಸೇರಿದಂತೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗಿದೆ.  ಏತನ್ಮಧ್ಯೆ ಕರಾವಳಿ ಭಾಗದಲ್ಲಿ ಇಂದಿನಿAದ ಸೆಪ್ಟೆಂಬರ್ 17 ರವರೆಗೆ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಲಿದೆ. ಹೀಗಾಗಿ 14 ರಿಂದ 17ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Tags: ChamarajanagaraCoronadistrict newsmahadeshwara templepolicepoliticsRainsiddaramayya
ShareTweetSendShare
Join us on:

Related Posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

by admin
February 16, 2026
0

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ...

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram