ಬೆಂಗಳೂರು : ಪಾದರಾಯನಪುರದಲ್ಲಿ ನಡೆದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕೊರೊನಾ ವಿಚಾರವಾಗಿ ಕ್ವಾರೆಂಟೈನ್ ಮಾಡಲು ಹೋಗಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಗುಂಡಾವರ್ತನೆ ತೋರಿದಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಮೃದು ಧೋರಣೆಯ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪಾದರಾಯನಪುರದಲ್ಲಿ ಗುಂಡಾವರ್ತನೆ ತೋರಿದವರ ವಿಷಯದಲ್ಲಿ ಮೃದು ಧೋರಣೆಯ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸರ್ವತಂತ್ರ ಸ್ವತಂತ್ರರು. ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ ಎಂದು ಹೇಳಿದರು.








