ಬಳ್ಳಾರಿ: ಇಂದು ಲಖನೌ ಕೋರ್ಟ್ ನಿಂದ ಶತಮಾನಗಳ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಹೊರಬೀಳಲಿದೆ.
ಈ ಹಿನ್ನೆಲೆ ಇಡೀ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಅದ್ರಲ್ಲೂ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ಗಣಿನಾಡು ಬಳ್ಲಾರಿಯಲ್ಲೂ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಪ್ರತಿಚಟುವಟಿಕೆ ಮೇಲೂ ನಿಗಾವಹಿಸಿದ್ದಾರೆ.
ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನ ನಿಯೋಜಿಸಲಾಗಿದೆ.
ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಾಮಾಜಿಕ ಜಾಲತಾಣದ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಪ್ರಚೋದನಕಾರಿ ಪೋಸ್ಟ ಗಮನಕ್ಕೆ ಬಂದರೆ ಅಂತವರ ವಿರುದ್ಧ ಕ್ರಮ ಕಥೈಗೊಳ್ಳಲು ಸಿದ್ಧತೆ ನಡೆಸಿಕೊಂಡಿದ್ದಾರೆ.
ಇನ್ನೂ ಬಳ್ಳಾರಿ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಖಾಕಿ ಗಸ್ತು ತಿರುಗಲಿದ್ದು, ಪ್ರಚೋದನಕಾರಿ ನೆಡವಳಿಕೆ ತೋರಿಸಿದವರ ಹೆಡೆಮುರಿಕಟ್ಟಲು ಸಜ್ಜಾಗಿದ್ದಾರೆ.








