ಬೆಂಗಳೂರು: ಬೈಕ್ ಚಾಲನೆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ಧರಿಸಿರಬೇಕೆಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿವೆ. ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದರೆ, ಇನ್ನೂ ಹಲವರು ಸಾವನ್ನಪ್ಪಿದ್ದಾರೆ. ಹೀಗಾಗಿ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ರಾಜ್ಯದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲೈಟ್ನ್ನು ಧರಿಸುವಂತೆ ನಿರ್ದೇಶನಗಳನ್ನು ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.