ಅನಾಥ ವೃದ್ಧೆಗೆ ತುತ್ತು ತಿನ್ನಿಸಿದ ಪೊಲೀಸ್ – ನೆಟ್ಟಿಗರು ಫಿದಾ
ಉತ್ತರಪ್ರದೇಶ : ಲಾಕ್ ಡೌನ್ ಸಂದರ್ಭದಲ್ಲಿ ಪೊಲೀಸರು ಕಷ್ಟ ಪಟ್ಟು ಹಗಲಿರುಳು ಎನ್ನದೇ ಶ್ರಮಿಸುತ್ತಿದ್ದಾರೆ.. ಇನ್ನೂ ಕೆಲವೆಡೆ ಜನರು ಪೊಲೀಸರ ಜೊತೆಗೆ ಅನುಚಿತ ವರ್ತನೆ ತೋರಿದ್ರೆ ಕೆಲ ಪೊಲೀಸರು ಸಹ ಜನರ ಜೊತೆ ಅನಾಗರಿಕರಂತೆ ವರ್ತಿಸಿದ್ದಾರೆ.. ಆದ್ರೆ ಇದೀಗ ಪೊಲೀಸ್ ಅಧಿಕಾರಿಯೊಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿಯ ಕಾರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ..
ಹೌದು.. ರಸ್ತೆ ಬದಿಯಲ್ಲಿ ಕುಳಿತಿದ್ದ ಅನಾಥ ವೃದ್ಧೆಗೆ ತುತ್ತು ಅನ್ನ ತಿನ್ನಿಸಿದ ಪೊಲೀಸ್ ಅಧಿಕಾರಿಯ ಫೊಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ನೋಡಿದ ನೆಟ್ಟಿಗರು ಪೊಲೀಸ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಫೋಟೋವನ್ನು ಪ್ಯಾರಾಲಿಂಪಿಯನ್ ರಿಂಕು ಹುಡಾ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.