ಪ್ರಿಯಾಂಕಾ ವಾದ್ರಾ , ಕೈ ನಾಯಕರು ಪೊಲೀಸರ ವಶಕ್ಕೆ..!
ನವದೆಹಲಿ: ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ. ಇನ್ನೂ ಇದೇ ಪ್ರಯುಕ್ತ ಕಾಂಗ್ರೆಸ್ ರಾಷ್ಟ್ರಪತಿ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಮಾತ್ರವಲ್ಲದೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸೇರಿದಂತೆ ಇನ್ನೂ ಕೆಲ ಕೈ ನಾಯಕರನ್ನ ವಶಕ್ಕೆ ಪಡೆದಿದ್ದಾರೆ.
ಆನ್ ಲೈನ್ ನಲ್ಲಿ ಥಾಯ್ ರಾಜ ಪ್ರೇಯಸಿಯ ನಗ್ನ ಫೋಟೋಸ್
ಈ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯ ಪ್ರವೇಶವನ್ನು ಕೋರಿ ಕಾಂಗ್ರೆಸ್ ನಿಯೋಗವು ಗುರುವಾರ ರಾಷ್ಟ್ರ ಭವನದತ್ತ ಕಾಲ್ನಾಡಿಗೆ ಮೆರವಣಿಗೆಯನ್ನು ಹಮ್ಮಿಕೊಂಡಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡು ಕೋಟಿ ಹಸ್ತಾಕ್ಷರವಿರುವ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಾಂಗ್ರೆಸ್ ಪಕ್ಷವು ಸಲ್ಲಿಸಲು ನಿರ್ಧರಿಸಿತ್ತು. ಕಾಂಗ್ರೆಸ್‌ನ ಸಂಸದರು ಸೇರಿದಂತೆ ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನೈಟ್ ಕರ್ಪ್ಯೂ ಟೀಕೆಗೆ ಸುಧಾಕರ್ ಖಡಕ್ ಉತ್ತರ
ಆದರೆ ಈ ವೇಳೆ ಪೊಲೀಸರು ಕಾಂಗ್ರೆಸ್ ನಿಯೋಗವನ್ನು ತಡೆದು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಮುಖಂಡರನ್ನು ವಶಕ್ಕೆ ತೆಗೆದುಕೊಂಡರು. ಇನ್ನೂ ಕೇವಲ ಅನುಮತಿ ಪಡೆದ ನಾಯಕರಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ತೆರಳಲು ಅವಕಾಶ ನೀಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಇನ್ನೂ ಈ ವಿರುದ್ಧ ಅಸಮಾಧಾನವನ್ನ ಹೊರಹಾಕಿದ ಪ್ರಿಯಾಂಕಾ ವಾದ್ರಾ ಅವರು, . ಸರ್ಕಾರ ವಿರುದ್ಧದ ಯಾವುದೇ ಭಿನ್ನಾಭಿಪ್ರಾಯವನ್ನು ಭಯೋತ್ಪಾದಕ ಕೃತ್ಯ ಎಂದು ಹೇಳಲಾಗುತ್ತಿದೆ. ರೈತರಿಗೆ ನಮ್ಮ ಬೆಂಬಲವನ್ನು ಸೂಚಿಸಲು ಈ ಮೆರವಣಿಗೆಯನ್ನು ಕೈಗೊಳ್ಳುತ್ತಿದ್ದೇವೆ. ರೈತರು ಪ್ರತಿಭಟನೆಯಿಂದ ಹಿಂಜರಿಯಲ್ಲ. ಇದನ್ನ ಪ್ರಧಾನಿಗಳು ಅರಿಯಬೇಕಿದೆ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








