Mudigere: ಕಾಡಾನೆ ದಾಳಿಗೆ ಕಾರ್ಮಿಕ ಬಲಿ – ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್
ಕಾಡಾನೆ ದಾಳಿಯಿಂದ ಕಾರ್ಮಿಕ ಸಾವನ್ನಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳಿಯರು ಅರಣ್ಯ ಇಲಾಖೆ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಕ್ಕೆ ಪೊಲೀಸರು ಲಾಠಿ ಚಾರ್ಜ್ ನಡಸಿದ ಘಟನೆ ಚಿಕ್ಕ ಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ಕೆಲಸ ಮಗಿಸಿ ಮನೆಗೆ ಬರುವಾಗ 45 ವರ್ಷದ ಅರ್ಜುನ್ ಎಂಬ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿತ್ತು. ಆನೆ ದಾಳಿಯಿಂದಾಗಿ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಇಂದು ಅರ್ಜುನ್ ಅವರ ಮೃತದೇಹವನ್ನ ಸ್ಥಳಿಯರು ಅರಣ್ಯ ಇಲಾಖೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸ್ ಕಾನ್ಸಟೇಬಲ್ ಒಬ್ಬರು ಪ್ರತಿಭಟನಾಕಾರರನ್ನ ತಳ್ಳಿದ್ದಾರೆ ಎನ್ನಲಾಗಿದೆ. ಆಗ ಪ್ರತಿಭಟನಾಕಾರರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ವಾಕ್ಸಮರ ನಡೆದಿದ್ದು ನೂಕಾಟ ತಳ್ಳಾಟ ನಡೆದು ಲಾಠಿಚಾರ್ಜ ನಡದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕಾಡಾನೇ ಬಂದಾಗ ಪಟಾಕಿ ಹೊಡೆಯುವುದು ಬಿಟ್ಟು ಬೇರೇನೂ ಮಾಡುವುದಿಲ್ಲ ಆನೆ ಸೆರೆಯಿಡಿಯುವಂತೆ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಅರಣ್ಯ ಇಲಾಖೆಗೆ ಇನ್ನೆಷ್ಟು ಬಲಿ ಬೇಕು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.








