Wed. Oct 28th, 2020

ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದ ಪೋಲಿಸರು

1 min read
Police seized Rahul Gandhi

ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ರಾಹುಲ್ ಗಾಂಧಿ ಅವರನ್ನು  ವಶಕ್ಕೆ ಪಡೆದ ಪೋಲಿಸರು

ಹತ್ರಾಸ್, ಅಕ್ಟೋಬರ್01: ಕಾಂಗ್ರೆಸ್ ಮುಖಂಡ ಮತ್ತು ಸಂಸದ ರಾಹುಲ್ ಗಾಂಧಿ ಅವರನ್ನು  ಉತ್ತರ ಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹತ್ರಾಸ್‌ಗೆ ತೆರಳುವಾಗ ದೆಹಲಿ ಮತ್ತು ಉತ್ತರ ಪ್ರದೇಶದ ನಡುವಿನ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಾಹುಲ್ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ‌

ನಾನು ಹತ್ರಾಸ್‌ ವರೆಗೆ ಕಾಲ್ನಡಿಗೆಯಲ್ಲಿ ಹೋಗಲು ಬಯಸುತ್ತೇನೆ. ನನ್ನನ್ನು ಯಾವ ಸೆಕ್ಷನ್ ಅಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದೀರಿ ಎಂದು  ಪೊಲೀಸರನ್ನು ರಾಹುಲ್ ಪ್ರಶ್ನಿಸಿದ್ದಾರೆ. ಪೊಲೀಸರು, ಆದೇಶ ಉಲ್ಲಂಘನೆಗಾಗಿ ಸೆಕ್ಷನ್ 188 ಐಪಿಸಿ ಅಡಿಯಲ್ಲಿ ನಾವು ನಿಮ್ಮನ್ನು  ವಶಕ್ಕೆ ಪಡೆಯುತ್ತಿದ್ದೇವೆ ಎಂದು ಉತ್ತರಿಸಿದ್ದಾರೆ.
ಮಂಗಳವಾರ ಮೃತಪಟ್ಟ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ತೆರಳುತ್ತಿದ್ದರು ಎಂದು ವರದಿಗಳು ತಿಳಿಸಿವೆ.
ಯುಪಿ ಪೊಲೀಸರು ತಡರಾತ್ರಿ ಸಂತ್ರಸ್ತೆಯ ಶವಸಂಸ್ಕಾರ ಮಾಡಿರುವುದು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರು ನನ್ನನ್ನು ತಳ್ಳಿ, ಲಾಠಿಚಾರ್ಜ್ ಮಾಡಿದ್ದಾರೆ. ನಾನು ಕೇಳಲು ಬಯಸುತ್ತೇನೆ, ಮೋದಿ ಜಿ ಮಾತ್ರ ಈ ದೇಶದಲ್ಲಿ ಕಾಲ್ನಡಿಗೆಯಲ್ಲಿ ಹೋಗಲು ‌ ಸಾಧ್ಯವೇ? ಸಾಮಾನ್ಯ ವ್ಯಕ್ತಿ ನಡೆದು ಕೊಂಡು ಹೋಗಲು ಸಾಧ್ಯವಿಲ್ಲವೇ? ನಮ್ಮ ವಾಹನವನ್ನು ನಿಲ್ಲಿಸಲಾಯಿತು. ಹಾಗಾಗಿ ನಾವು ಕಾಲ್ನಡಿಗೆ ಪ್ರಾರಂಭಿಸಿದ್ದೆವು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ‌
ಉತ್ತರಪ್ರದೇಶ ಪೊಲೀಸರು ಅವರನ್ನು ಮುಂದಕ್ಕೆ ಹೋಗಲು ನಿರಾಕರಿಸಿದ ನಂತರ ಅವರು ನೂರಾರು ಬೆಂಬಲಿಗರೊಂದಿಗೆ ರಸ್ತೆಯಲ್ಲಿ ಕುಳಿತರು.

https://twitter.com/ANINewsUP/status/1311594285767122947?s=19

ದಲಿತ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹತ್ರಾಸ್‌ಗೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಾಹನಗಳನ್ನು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಗುರುವಾರ ನಿಲ್ಲಿಸಲಾಗಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ಯಾರಿ ಚೌಕ್ ಬಳಿ ಬೆಂಗಾವಲು ನಿಲ್ಲಿಸಲಾಗಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಹಿರಿಯ ಮುಖಂಡರು ಕಾಲ್ನಡಿಗೆಯಲ್ಲಿ ಮುಂದುವರಿಯುವಂತೆ ಪ್ರೇರೇಪಿಸಿದರು.
ಆದರೆ ಬಿಜೆಪಿ ಇದನ್ನು ನಿರಾಕರಿಸಿದ್ದು, ಕಾರಿನಲ್ಲಿ ಹೋಗಲು ಬಿಡದೇ ಇದ್ದಾಗ ರಾಹುಲ್ ಗಾಂಧಿ ನಡೆದುಕೊಂಡು ಹೋಗಲು ಯತ್ನ ನಡೆಸಿದರು.
ಆ ವೇಳೆ ತಳ್ಳಾಟ ನೂಕಾಟ ನಡೆದಿದ್ದು ರಾಹುಲ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಹೇಳಿದೆ.

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV