ರಾತ್ರಿ ವೇಳೆ ಹೊರಜಿಲ್ಲೆಗಳಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ 69 ವಾಹನಗಳನ್ನು ವಾಪಸ್ ಕಳುಹಿಸಿದ ಪೊಲೀಸರು
ಲಾಕ್‌ಡೌನ್ ಮತ್ತು ವಾರಾಂತ್ಯದ ಕರ್ಫ್ಯೂ ಇನ್ನೂ ಜಾರಿಯಲ್ಲಿದ್ದರೂ, ಜನರು ಅನಗತ್ಯವಾಗಿ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜಿಲ್ಲಾ ಗಡಿ ಮತ್ತು ಇತರ ಸ್ಥಳಗಳಲ್ಲಿ ವಾಹನಗಳ ತಪಾಸಣೆ ಹೆಚ್ಚಿಸಿದ್ದಾರೆ.
ಜೂನ್ 19 ರ ಶನಿವಾರ ಮತ್ತು ಜೂನ್ 20 ರ ಭಾನುವಾರ ರಾತ್ರಿಯಿಂದ, ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಹಲವಾರು ವಾಹನಗಳನ್ನು ಪರಿಶೀಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಇತರ ಜಿಲ್ಲೆಗಳಿಂದ ಅನೇಕ ಪ್ರವಾಸಿಗರು ಸರಿಯಾದ ಕಾರಣವಿಲ್ಲದೆ ಆಗಮಿಸುತ್ತಿದ್ದಾರೆ ಎಂಬ ವರದಿಗಳು ಬಂದಿದೆ.

ಈ ಕಾರುಗಳಲ್ಲಿದ್ದ ಹಲವಾರು ಪ್ರಯಾಣಿಕರು ವೈದ್ಯಕೀಯ ಕಾರಣಗಳಿಗಾಗಿ ಮಂಗಳೂರಿಗೆ ಬರುತ್ತಿದ್ದೇವೆಂದು ಹೇಳಿದ್ದಾರೆ, ಆದರೆ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಧ್ಯರಾತ್ರಿ ಮತ್ತು ಮುಂಜಾನೆ 3 ರ ನಡುವೆ ಧರ್ಮಸ್ಥಳ ದೇವಸ್ಥಾನದತ್ತ ಸಾಗುತ್ತಿದ್ದ 69 ವಾಹನಗಳನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ.
ಡಿಸಿ ಸೂಚನೆಯಂತೆ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಮತ್ತು ಚಾರ್ಮಡಿ ಘಾಟ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಉಜಿರೆಯಲ್ಲೂ ಕಟ್ಟುನಿಟ್ಟಾದ ವಾಹನ ಪರಿಶೀಲನೆ ನಡೆಸಲಾಗುತ್ತಿದೆ.
ಕಳೆದ ಎರಡು ಮೂರು ದಿನಗಳಿಂದ ಧರ್ಮಸ್ಥಳ ಮತ್ತು ಸುಬ್ರಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇತರ ಜಿಲ್ಲೆಗಳಿಂದ ಆಗಮಿಸುತ್ತಿದ್ದಾರೆ. ಈ ಮಾಹಿತಿಯ ಹಿನ್ನೆಲೆಯಲ್ಲಿ ಇಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಇದಲ್ಲದೆ, ಜಿಲ್ಲೆಗೆ ಬರುವ ವಾಹನಗಳನ್ನು ಪರಿಶೀಲಿಸಲು ಚಾರ್ಮಾಡಿ ಮತ್ತು ಪೆರಿಯಶಾಂತಿಯಲ್ಲಿ ಹೆಚ್ಚುವರಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲು ಡಿಸಿ ಡಾ.ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1405342127433961477?s=19
ಸಬ್ಬಕ್ಕಿ – ಹೆಸರುಬೇಳೆ ದೋಸೆ#Saakshatv #cookingrecipe https://t.co/Cx5YU1j8WT
— Saaksha TV (@SaakshaTv) June 17, 2021
https://twitter.com/SaakshaTv/status/1405704073349849089?s=19
https://twitter.com/SaakshaTv/status/1406136427319070720?s=19
#Dharmasthala








