ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ ಪೊಲೀಸರು

1 min read

ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ ಪೊಲೀಸರು

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಬ್ ಇನ್ಸ್‍ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನೆಲೆ, ಖಾಸಗಿ ರೆಸಾರ್ಟ್‍ನಲ್ಲಿ ಬೀಳ್ಕೊಡುಗೆ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಐಟಂ ಸಾಂಗ್‍ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಈ ಡ್ಯಾನ್ಸ್‌ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊಳ್ಳೇಗಾಲ DYSP ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್ PSI ಚೇತನ್ ಹಾಗು ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗಳು ನೃತ್ಯ ಮಾಡಿದ್ದಾರೆ.  ಐಟಂ ಸಾಂಗ್ ಕುಣಿತದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ಬೀಳ್ಕೊಡುಗೆ ಪಾರ್ಟಿಯಲ್ಲಿ ಮದ್ಯದ ನಶೆಯಲ್ಲಿ ಪೊಲೀಸ್ ಅಧಿಕಾರಿಗಳು ತೇಲಾಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕ ಸ್ಥಳದಲ್ಲಿ ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆ ಮಾಡಿದ್ದಾರೆಂಬ ಆರೋಪವಿದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಮ್ಯಾನುವೆಲ್ ಪ್ರಕಾರ ಶಿಸ್ತು ಪಾಲಿಸದೆ ಅಶಿಸ್ತು ಪ್ರದರ್ಶನ ಮಾಡಿದ್ದಾರೆ. ಕರ್ನಾಟಕ ಸೇವಾ ನಡೆತೆ ನಿಯಮ ಉಲ್ಲಂಘನೆಯಾಗಿದೆ ಎಂದು ಪರ ವಿರೋಧ ಚರ್ಚೆಯಾಗ್ತಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd