ದೇಶದಲ್ಲಿ ದಲಿತ ರಾಷ್ಟ್ರಪತಿಯನ್ನು ಆಯ್ಕೆ ಮಾಡಿದ್ದು ಬಿಜೆಪಿ : ಕಟೀಲ್
ಚಾಮರಾಜನಗರ : ಇಂದು ದೇಶದಲ್ಲಿ ದಲಿತ ರಾಷ್ಟ್ರಪತಿಯನ್ನ ಆಯ್ಕೆ ಮಾಡಿದ್ದು, ಬಿಜೆಪಿ. ನಮ್ಮ ಪಕ್ಷ ನುಡಿದಂತೆ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಭವನದಲ್ಲಿ ಇಂದು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಭಾಗಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಟೀಲ್, ಬಿಜೆಪಿ ನುಡಿದಂತೆ ನಡೆದ ಪಕ್ಷವಾಗಿದೆ ಎಂದು ಹೇಳಿದರು.
ರಾಜ್ಯಪಾಲರು ಭಾಷಣದಲ್ಲಿ ಏನೂ ಹೇಳಿಲ್ಲ, ಕಾರಣ ಬಿಜೆಪಿ ಸಾಧನೆ ಶೂನ್ಯ
ಬೆಂಗಳೂರು : ರಾಜ್ಯಪಾಲ ಭಾಷಣದಲ್ಲಿ ಏನೂ ಹೇಳಿಲ್ಲ. ಇದಕ್ಕೆ ಕಾರಣ ರಾಜ್ಯ ಬಿಜೆಪಿ ಸರ್ಕಾರದ ಶೂನ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿಲುವು, ಯೋಜನೆಗಳು, ಮುನ್ನೋಟದ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಆದರೆ, ರಾಜ್ಯಪಾಲರು ಇಂದು ಮಾಡಿದ ಭಾಷಣದಲ್ಲಿ ಆ ಯಾವುದೂ ಇಲ್ಲ. ಇದೊಂದು ಸುಳ್ಳಿನ ಕಂತೆ. ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಆರೋಪಿಸಿದರು.
ಯಾವುದೇ ಒಂದು ಸರ್ಕಾರಕ್ಕೆ ದೂರದೃಷ್ಟಿ ಇರಬೇಕು. ಈ ಸರ್ಕಾರದ ಅವಧಿ ಇನ್ನೂ ಎರಡೂವರೆ ವರ್ಷ ಇದೆ. ಈ ಅವಧಿಯಲ್ಲಿ ನಾವು ಏನು ಮಾಡಲಿದ್ದೇವೆ ಎಂಬುದನ್ನು ಹೇಳಬೇಕಿತ್ತು. ರಾಜ್ಯದ ಹಣಕಾಸು ಪರಿಸ್ಥಿತಿ, ನೀರಾವರಿ ಯೋಜನೆಗಳ ಕುರಿತು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪ ಮಾಡಬೇಕಿತ್ತು. ರಾಜ್ಯ ಅಭಿವೃದ್ಧಿಯಲ್ಲಿ 10 ವರ್ಷ ಹಿಂದಕ್ಕೆ ಹೋಗಿದೆ. ಹಣಕಾಸು ಪರಿಸ್ಥಿತಿ ಹದಗೆಡಲು, ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳಲು, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ ಮಾಡದಿರಲು ಕೊರೊನಾ ಕಾರಣ ಎಂದು ಮುಖ್ಯಮಂತ್ರಿ ಅವರು ನೆಪ ಹೇಳುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ಈ ಅವಧಿಯಲ್ಲಿನ ಯೋಜನೆ, ಕಾರ್ಯಕ್ರಮಗಳು, ಮುನ್ನೋಟ, ದೂರದೃಷ್ಟಿ ಏನು ಎಂಬುದರ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಏನೂ ಹೇಳಿಲ್ಲ. ಇದಕ್ಕೆ ಕಾರಣ, ರಾಜ್ಯ ಬಿಜೆಪಿ ಸರ್ಕಾರದ ಶೂನ್ಯ ಸಾಧನೆ ಎಂದು ವಾಗ್ದಾಳಿ ನಡೆಸಿದರು.
ಮಂತ್ರಿಯಾಗುವ `ಹಳ್ಳಿಹಕ್ಕಿ ಕನಸು ನುಚ್ಚುನೂರು ‘ : ವಿಶ್ವನಾಥ್ ಗೆ ಸುಪ್ರೀಂ ಶಾಕ್
ನವದೆಹಲಿ : ಹಳ್ಳಿಹಕ್ಕಿ ಖ್ಯಾತಿಯ ಹೆಚ್ ವಿಶ್ವನಾಥ್ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಮಂತ್ರಿಯಾಗುವ ಕನಸು ಹೊತ್ತು ಬಿಜೆಪಿಗೆ ಬಂದು ಒದ್ದಾಡುತ್ತಿರುವ ವಿಶ್ವನಾಥ್, ಕನಸು ನುಚ್ಚುನೂರಾಗಿದೆ. ಹೌದು..! ವಿಶ್ವನಾಥ್ ಶಾಸಕತ್ವದಿಂದ ಅನರ್ಹಗೊಂಡಿರುವುದರಿಂದ ಮಂತ್ರಿಯಾಗಲು ಬರುವುದಿಲ್ಲ ಎಂದು ಹೈಕೋರ್ಟ್ ನೀಡಿತ್ತು. ಈ ಆದೇಶವನ್ನು ಇದೀಗ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಸಂವಿಧಾನದ ಆರ್ಟಿಕಲ್ 164 (1B), 361 B ಅಡಿ ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ಸಿಜೆ ಎ.ಎಸ್ ಓಕಾ, ಎಸ್.ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿತ್ತು. ಈ ಮೂಲಕ ಸಚಿವರಾಗುವ ಹಂಬಲದಲ್ಲಿದ್ದ ಎ.ಹೆಚ್.ವಿಶ್ವನಾಥ್ ಗೆ ಇದು ಭಾರಿ ಪೆಟ್ಟು ನೀಡಿತ್ತು.
ಬೆಳಗಾವಿ ಬೈಎಲೆಕ್ಷನ್ಗೆ ಕಾಂಗ್ರೆಸ್ನಿಂದ ನಾನು ಆಕಾಂಕ್ಷಿ ಎಂದ `ಸಾಹುಕಾರ’ ಸತೀಶ್
ಯಾದಗಿರಿ: ಸದ್ಯದಲ್ಲೇ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆದಿದೆ. ಸುರೇಶ್ ಅಂಗಡಿ ಅಂಗಡಿ ನಿಧನದಿಂದ ತೆರವಾದ ಉಪಚುನಾವಣೆಗೆ ಕಾಂಗ್ರೆಸ್ನಿಂದ ಟಿಕೆಟ್ಗಾಗಿ ಹಲವು ನಾಯಕರು ತೀವ್ರ ಲಾಬಿ ನಡೆಸುತ್ತಿದ್ದಾರೆ. ಈ ನಡುವೆ, ಬೆಳಗಾವಿ ಲೋಕಸಭಾ ಚುನಾವಣೆಗೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಹೈಕಮಾಂಡ್ ಗೆ ತಿಳಿಸಿದ್ದೇನೆ ಎಂದು ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ಮಾತಣಾಡಿದ ಸತೀಶ್ ಜಾರಕಿಹೊಳಿ, ಈ ಬಗ್ಗೆ ಮೇಲ್ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಪಕ್ಷದ ಹೈಕಮಾಂಡ್ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕೊಟ್ಟ ಮಾತಿನಂತೆ ಯುವತಿಗೆ ಉದ್ಯೋಗ ಕೊಡಿಸಿದ ಕುಮಾರಸ್ವಾಮಿ
ಬೆಂಗಳೂರು : ಎರಡು ದಿನಗಳ ಹಿಂದೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಾಗಮಂಗಲ ಪ್ರವಾಸ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಆಗಮಿಸುವ ವೇಳೆ ಮಹಿಳೆಯೊಬ್ಬರ ಕಾರು ಅಡ್ಡಿಗಟ್ಟಿ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದರು. ಆಗ ಕುಮಾರಸ್ವಾಮಿ ಮಗಳನ್ನು ಬೆಂಗಳೂರಿನ ನಿವಾಸಕ್ಕೆ ಕಳುಹಿಸಿಕೊಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇದೀಗ ಕೊಟ್ಟ ಮಾತಿನಂತೆ ಕುಮಾರಸ್ವಾಮಿ ಅಸಹಾಯಕ ಮಹಿಳೆಯ ಮಗಳಿಗೆ ಕೆಲಸ ಕೊಡಿಸಿದ್ದಾರೆ.
ಡಿಕೆಶಿ ಮತ್ತೆ ಜೈಲಿಗೆ ಹೋಗೋದು ಪಕ್ಕಾ: ಬಂಡೆಗೆ ಕಟೀಲ್ ಭವಿಷ್ಯ..!
ಚಿತ್ರದುರ್ಗ: ಡಿಕೆಶಿ ಮೊನ್ನೆ ಎಲ್ಲಿಂದ ಬಂದರು(ಜೈಲಿನಿಂದ), ಮೆರವಣಿಗೆ ಮಾಡಿದ್ರು. ಮತ್ತೆ ಅಲ್ಲಿಗೆ (ಜೈಲಿಗೆ) ಹೋಗುವುದು ಪಕ್ಕಾ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಕನಕಪುರ ಬಂಡೆಗೆ ತಿರುಗೇಟು ನೀಡಿದ್ದಾರೆ.ಕೇಂದ್ರ& ರಾಜ್ಯ ಸರ್ಕಾರದ ಅಂತ್ಯಕಾಲ ಹತ್ತಿರ ಬರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೀಡಿದ ಹೇಳಿಕೆಗೆ ಕಟೀಲ್ ತಿರುಗೇಟು ನೀಡಿದ ಕಟೀಲ್, ಡಿ.ಕೆ ಶಿವಕುಮಾರ್ ಅವರು ರಾಜಕೀಯ ಅಂತ್ಯ ಕಾಣುತ್ತಾರೆ ಎಂದು ಟಾಂಗ್ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel