ರಾಮನಗರ: ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ದೇವರ ಮೊರೆ ಹೋಗುವುದು ಸರ್ವೇ ಸಾಮಾನ್ಯ. ಸದ್ಯ ಡಿ.ಕೆ.ಶಿವಕುಮಾರ್ ಮೊದಲಿನಿಂದಲೂ ದೇವ ಭಕ್ತರಾಗಿದ್ದು, ಈ ಹಿನ್ನೆಲೆಯಲ್ಲ ಇಂದು ಬೆಳ್ಳಂಬೆಳಿಗ್ಗೆ ಸ್ವಕ್ಷೇತ್ರ ಕನಕಪುರ ತಾಲೂಕಿನಲ್ಲಿರುವ ಮಾಳಗಾಳು ಗ್ರಾಮದ ಈಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಅರ್ಕಾವತಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ದೇವಸ್ಥಾನಕ್ಕೆ ತೆರಳಿ, ಈಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಳಗಾಳು ಗ್ರಾಮಸ್ಥರಾದ ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಮಂಜುನಾಥ್, ಕಾಂಗ್ರೆಸ್ ವಕ್ತಾರ ಮರಸಪ್ಪ ರವಿ ಸೇರಿದಂತೆ ಹಲವರು ಇದ್ದರು.
ಕನಕಪು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಕೆ. ಶಿವಕುಮಾರ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ಶುಕ್ರವಾರ ಅಂಗೀಕರಿಸಿದ್ದಾರೆ. ಈ ಮೂಲಕ ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಡಿಕೆಶಿ ನಿರಾಳರಾಗಿದ್ದಾರೆ.