“ಜಮೀರ್ ಮನೆ ಮಾರಲು ರೆಡಿಯಾಗ್ಲಿ”..!
ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಸಿಸಿಬಿ ಕಚೇರಿಗೆ ತೆರಳುವ ಮುನ್ನ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ನಾನು ಸರ್ಕಾರಕ್ಕೆ ಪ್ರಾಮಾಣಿಕವಾಗಿ ಟ್ಯಾಕ್ಸ್ ಕಟ್ಟುತ್ತಿದ್ದೇನೆ. ಅದೇ ರೀತಿ ಶಾಸಕ ಜಮೀರ್ ಅಹಮದ್‍ರಿಂದಲೂ ಸರ್ಕಾರಕ್ಕೆ ಟ್ಯಾಕ್ಸ್ ಕಟ್ಟುವಂತೆ ಮಾಡುತ್ತಿದ್ದೇನೆ ಎಂದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಮೀರ್ ಅಹಮದ್ ಶ್ರೀಲಂಕಾದ ಕ್ಯಾಸಿನೋದಲ್ಲಿದ್ದ ಸಾಕ್ಷ್ಯ ಹೇಳ್ತೇನೆ. ಶ್ರೀಲಂಕಾದ ವ್ಯವಹಾರದ ದಾಖಲೆ ಕೊಡ್ತೇನೆ ಎಂದು ಹೇಳುವ ಮೂಲಕ ಪ್ರಶಾಂತ್ ಸಂಬರಗಿ ಕುತೂಹಲ ಮೂಡಿಸಿದ್ದಾರೆ
ಪಾಪಿ ತಂದೆ..!
ಪಾಪಿ ತಂದೆಯೊಬ್ಬ ತನ್ನ ಸ್ವಂತ ಮಗಳನ್ನೇ ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರಿನ ಕಡೂರು ಪಟ್ಟಣದಲ್ಲಿ ನಡೆದಿದೆ. ದೊಡ್ಡಪೇಟೆಯ ನಿವಾಸಿ ಉಮಾಶಂಖರ್ ಹೆಣ್ಣು ಮಗು ಎಂಬ ಕಾರಣಕ್ಕೆ ಈ ಹೀನ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಕಡೂರು ಪೊಲೀಸರು ಬಂಧಿಸಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೂರುವರೆ ವರ್ಷ ಯಡಿಯೂರಪ್ಪರೇ ಸಿಎಂ..!
ಮುಂದಿನ ಮೂರುವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ದಾವಣಗೆರೆಯಲ್ಲಿ ಹೇಳಿದ್ದಾರೆ. ಅಲ್ಲದೇ ಅವರಿಗೆ ಯಾವುದೇ ಹಿನ್ನಡೆ ಆಗುತ್ತಿಲ್ಲ. ಅದು ಮಾಧ್ಯಮಗಳ ಸೃಷ್ಟಿ, ಈ ಊಹಾಪೋಹಗಳು ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಎಸ್ ವೈ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಕೇವಲ ಸೌಹಾರ್ದದ ಭೇಟಿ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
“ಜಮೀರ್ ಗುಜರಿ ಗಿರಾಕಿಯಂತೆ“
ದಾವಣಗೆರೆ: ಶಾಸಕ ಜಮೀರ್ ಅಹಮದ್ ಖಾನ್ ಗುಜರಿ ಗಿರಾಕಿ. ಗಳೀಸಿರೋದೆಲ್ಲ ಅನೈತಿಕ ಚಟುವಟಿಕೆಗಳಿಂದಲೇ. ಅನೈತಿಕ ಚಟುವಟಿಕೆಯಿಂದಲೇ ಉನ್ನತ ಸ್ಥಾನಕ್ಕೆ ಬಂದ ವ್ಯಕ್ತಿ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಜಮೀರ್ ವಿರುದ್ಧ ಕಿಡಿಕಾರಿದ್ದಾರೆ. ಇದೇ ವೇಳೆ ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ಮುಂದೆ ವಾಚ್ ಮನ್ ಆಗುತ್ತೇನೆ ಎಂದಿದ್ದರು. ಆದರೆ ಇನ್ನೂ ಆಗಲಿಲ್ಲ. ಜಮೀರ್ ಎರಡು ನಾಲಿಗೆಯ ವ್ಯಕ್ತಿ ಎಂದು ಟೀಕಿಸಿದ್ದಾರೆ.
ಭಾರತದಲ್ಲಿ ಕೊರೊನಾ ರೌದ್ರಾವತಾರ..!
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 97,570 ಹೊಸ ಕೇಸ್’ಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ. ಒಂದೇ ದಿನ 97,570 ಹೊಸ ಕೇಸ್ ಗಳು ಪತ್ತೆಯಾಗಿದೆ. ಕಿಲ್ಲರ್ ಕೊರೊನಾಗೆ 1,201 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಸಾವಿನ ಸಂಖ್ಯೆ 77,472ಕ್ಕೆ ತಲುಪಿದೆ.
ಜೆಇಇ ಪರೀಕ್ಷೆ ಫಲಿತಾಂಶ ಪ್ರಕಟ..!
ನವದೆಹಲಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇಂಜಿನಿಯರಿಂಗ್ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶವನ್ನ ಪ್ರಕಟಿಸಿದೆ. ಇದ್ರಲ್ಲಿ 24 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.
ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು 100ಕ್ಕೆ 100ರಷ್ಟು ಅಂಕ ಗಳಿಸಿದ್ದು, ತೆಲಂಗಾಣದ 8 ವಿದ್ಯಾರ್ಥಿಗಳು ಟಾಪರ್ಗಳಾಗಿ ಹೊರಹೊಮ್ಮಿದ್ದಾರೆ. ಇನ್ನೂ ತೆಲಂಗಾಣ ಮೊದಲ ಸ್ಥಾನದಲ್ಲಿದ್ದರೆ ನಂತರದ ಸ್ಥಾನದಲ್ಲಿ ದೆಹಲಿ, ರಾಜಸ್ಥಾನ, ಆಂಧ್ರಪ್ರದೇಶ, ಹರಿಯಾಣ, ಗುಜರಾತ್ ಹಾಗೂ ಮಹಾರಾಷ್ಟ್ರವಿದೆ.
‘ನಶೆ ನಂಟು’: ಮತ್ತೆ ಮೂವರು ಅಂದರ್..!
ಸ್ಯಾಂಡಲ್ ವುಡ್ ಡ್ರಗ್ ನಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಐದನೇ ಆರೋಪಿ ಆಗಿದ್ದ ವೈಭವ್ ಜೈನ್ ಹಾಗೂ ಇಬ್ಬರು ಹೊಸ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ಪ್ರತೀಕ್ ಶೆಟ್ಟಿ ಹಾಗೂ ಹರಿಯಣ ಮೂಲದ ಆದಿತ್ಯ ಅಗರ್ವಾಲ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತಂಗಾಳಿ ನಾಗರಾಜ್ ನಿಧನ..!
ಕನ್ನಡ ಚಿತ್ರರಂಗದ ಖ್ಯಾತ ಚಿತ್ರಸಾಹಿತಿ, ಗೀತ ರಚನೆಕಾರರಾದ ತಂಗಾಳಿ ನಾಗರಾಜ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗರಾಜ್ ಅವರ ನಿಧನಕ್ಕೆ ಗೀತರಚನೆಕಾರ ಕವಿರಾಜ್ ಸೇರಿದಂತೆ ಚಂದನವನದ ಇತರ ಗೀತರಚನೆಕಾರರು, ಸಂಗೀತ ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.
ನೈಟ್ ರೈಡರ್ಸ್ ಗೆ ಗುಡ್ ನ್ಯೂಸ್
ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ಐಪಿಎಲ್ ಹಂಗಾಮ ಶುರುವಾಗಲಿದೆ. ಆದ್ರೆ ಕೆಲವೊಂದು ತಂಡಗಳಿಗೆ ಆರಂಭಿಕ ಪಂದ್ಯಗಳಿಗೆ ವಿದೇಶಿ ಪ್ಲೇಯರ್ಸ್ ಅಲಭ್ಯತೆ ಕಾಡುತ್ತಿದ್ದು, ಈ ವಿಚಾರವಾಗಿ ಕೆಕೆಆರ್ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಯರ್ಸ್ ಗಳಾಗಿರುವ ಇಯಾನ್ ಮಾರ್ಗನ್ ಹಾಗೂ ಪ್ಯಾಟ್ ಕಮಿನ್ಸ್ ಐಪಿಎಲ್ ನ ಆರಂಭಿಕ ಪಂದ್ಯಗಳಿಗೆ ಲಭ್ಯರಿದ್ದಾರೆ ಎಂದು ತಿಳಿದುಬಂದಿದೆ. ಕೆಕೆಆರ್ ಮೊದಲ ಪಂದ್ಯ ಸೆಪ್ಟೆಂಬರ್ 23ರಂದು ನಡೆಯಲಿದ್ದು, ಮಾರ್ಗನ್ ಹಾಗೂ ಕಮಿನ್ಸ್ ಸೆಪ್ಟೆಂಬರ್ 17ರಂದು ದುಬೈಗೆ ಆಗಮಿಸಿದ್ದಾರೆ.
ರೈನಾ ಬದಲಿಗೆ ಡೇವಿಡ್ ಮಮಿಡ್ ಡೇ ನ್ಯೂಸ್ ರೌಂಡ್ ಅಪ್..!
ಈ ಬಾರಿಯ ಐಪಿಎಲ್ ಗೆ ಸುರೇಶ್ ರೈನಾ ಅಲಭ್ಯವಾಗಿದ್ದಾರೆ. ಹೀಗಾಗಿ ಸಿಎಸ್ ಕೆಗೆ ಸಂಕಷ್ಟ ಎದುರಾಗಿದ್ದು, ಈಗ ರೈನಾ ಜಾಗಕ್ಕೆ ಇಂಗ್ಲೆಂಡ್ ನ ಡೇವಿಡ್ ಮಲನ್ ಹೆಸರು ಕೇಳಿಬಂದಿದೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯಲ್ಲಿ ಮಲನ್, ಅದ್ಭುತ ಪ್ರದರ್ಶನ ತೋರಿದ್ದಾರೆ. ಈ ಹಿನ್ನೆಲೆ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಡೇವಿಡ್ ಮಲನ್ ಅವರನ್ನು ಚೆನ್ನೈ ರೈನಾ ಜಾಗಕ್ಕೆ ಆಯ್ಕೆ ಮಾಡುವುದು ಫೈನಲ್ ಆಗಿದೆ ಎನ್ನಲಾಗಿದೆ. ಮಲನ್ ಐಸಿಸಿ ಟಿ-20 ಬ್ಯಾಟಿಂಗ್ ಯಾರ್ಂಕಿಂಗ್ ನಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.








