ಇಂಫಾಲ: ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಗುಂಡಿನ ದಾಳಿ ನಡೆದಿತ್ತು. ಸದ್ಯ ಮರು ಮತದಾನ ಮಾಡುವುದಾಗಿ ಮಣಿಪುರ ಮುಖ್ಯ ಚುನಾವಣಾಧಿಕಾರಿ ಆದೇಶಿಸಿದ್ದಾರೆ.
ಏ. 19 ರಂದು ನಡೆದ ಮೊದಲ ಮತದಾನದ ಸಂದರ್ಭದಲ್ಲಿ ಹಲವೆಡೆ ಗುಂಡಿನ ದಾಳಿ, ಬೆದರಿಕೆ, ಇವಿಎಂ ಯಂತ್ರ ನಾಶ ಮಾಡಿರುವ ಕುರಿತು ವರದಿಯಾಗಿದ್ದವು. ಹೀಗಾಗಿಯೇ ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ, ಕ್ಷೇತ್ರಗಾವೊದಲ್ಲಿ 4, ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ 1 ಮತ್ತು ಉರಿಪೋಕ್‌ನಲ್ಲಿ 3 ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಂತೌಜಮ್‌ನಲ್ಲಿ 1 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಆದೇಶಿಸಲಾಗಿದೆ.
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಮರು ಮತದಾನಕ್ಕೆ ಕೂಡ ಒತ್ತಾಯಿಸಿತ್ತು. ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಮಾತನಾಡಿ, ಮಣಿಪುರದ ಒಳ ಕ್ಷೇತ್ರದ 36 ಮತ್ತು ಹೊರ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸಿದ್ದರು.