ಪೊನ್ನಿಯನ್ ಸೆಲ್ವನ್ ಚಿತ್ರದ ಅದ್ದೂರಿ ಟ್ರೇಲರ್ ಬಿಡುಗಡೆ….
ಬಹುತಾರಾಗಣದ ಪ್ಯಾನ್ ಇಂಡಿಯನ್ ಸಿನಿಮಾ ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಟ್ರೇಲರ್ ಇಂದು ಬಿಡುಗಡೆ ಮಾಡಲಾಗಿದೆ. ಚೋಳ ಸಾಮ್ರಾಜ್ಯದ ಕಥೆಯನ್ನ ಈ ಸಿನಿಮಾ ಕಟ್ಟಿಕೊಡಲಿದೆ. ನಿರ್ದೇಶಕ ಮಣಿರತ್ನಂ ಅವರು ಅದ್ದೂರಿಯಾಗಿ ಚಿತ್ರವನ್ನ ತೆರೆ ಮೇಲೆ ತರಲಿದ್ದಾರೆ.
ಐಶ್ವರ್ಯಾ ರೈ, ವಿಕ್ರಮ್, ತ್ರಿಷಾ, ಜಯಂ ರವಿ, ಕಾರ್ತಿ, ಪ್ರಕಾಶ್ ರಾಜ್ ಸೇರಿದಂತೆ ಘಟಾನುಘಟಿ ನಟರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೆ.30ರಂದು ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಲಿದೆ.
ಎರಡು ಭಾಗಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಮೊದಲ ಭಾಗದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್ ಸೆಲ್ವನ್’ ಕೃತಿಯನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಬೃಹತ್ ಸೆಟ್ಗಳು, ಮೈ ನವಿರೇಳಿಸುವ ಸಾಹಸ ಸನ್ನಿವೇಶ, ಅದ್ದೂರಿ ಮೇಕಿಂಗ್ ಟ್ರೇಲರ್ ನಲ್ಲಿ ಕಂಡು ಬಂದಿದೆ.
ಎ.ಆರ್. ರೆಹಮಾನ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲಿದೆ.