ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಂಬಲ Bharat Bandh saaksha tv
ಬೆಂಗಳೂರು : ರೈತ ಸಂಘಟನೆಗಳು ಕರೆಕೊಟ್ಟಿರುವ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸಿದೆ.
ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ಸೆಪ್ಟೆಂಬರ್ 27ರಂದು ಭಾರತ್ ಬಂದ್ ಗೆ ಕರೆಕೊಟ್ಟಿವೆ.
ರೈತ ಸಂಘಟನೆಗಳ ಈ ಕರೆಗೆ ಸಾಕಷ್ಟು ಒಕ್ಕೂಟಗಳು ಬೆಂಬಲ ಸೂಚಿಸಿವೆ.
ಅದರಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.
ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ.
ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ.