ಶಿವಮೊಗ್ಗ: ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಎಂದು ಬಿಂಬಿಸಲಾಗಿರುವ ವ್ಯಕ್ತಿಯ ಅಶ್ಲೀಲ ವಿಡಿಯೋವೊಂದು ವೈರಲ್ ಆಗಿದ್ದು, ನಮ್ಮ ಆಪ್ತ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇದರಲ್ಲಿ ಉದ್ದೇಶ ಪೂರ್ವಕವಾಗಿ ನನ್ನ ಹೆಸರು ಬಳಕೆ ಮಾಡಿ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನಗೂ ಆ ವ್ಯಕ್ತಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿವೆ. ಹೀಗಾಗಿ ಕೇಸ್ ಗಳನ್ನು ಕೂಡ ಇತ್ತೀಚೆಗೆ ದಾಖಲು ಮಾಡಲಾಗಿತ್ತು. ಸದ್ಯ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಮಾಜಿ ಸಚಿವರು ಸ್ಪಷ್ಟನೆ ನೀಡಿದ್ದಾರೆ.








