ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲಾಕ್ ಡೌನ್ ನಡುವೆಯೂ ಕೊರೊನಾ ನಾಗಾಲೋಟ ಮುಂದುವರೆದಿದೆ. ಬೆಂಗಳೂರಿನಲ್ಲಿ ಕಳೆದ 24ಗಂಟೆಗಳಲ್ಲಿ 33 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇದರೊಂದಿಗೆ ಬೆಂಗಳೂರಿನಲ್ಲಿ 535 ಪೊಲೀಸರಿಗೆ ಕೊರೊನಾ ವಕ್ಕರಿಸಿದ್ದು 735 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಸೋಂಕು ಹರಡುವುದನ್ನು ತಡೆಯಲು 19 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಸಂಡೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಕೆಲ ಪ್ರದೇಶಗಳಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದರು. ಗೃಹ ಸಚಿವ ಬೊಮ್ಮಾಯಿ ಅವರಿಗೆ ಬೆಂಗಳೂರು ನಗರ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಸಾಥ್ ನೀಡಿದರು.
Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.
ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...








