ರಾಜ್ಯದಲ್ಲಿ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾಧ್ಯತೆ Ganeshotsav saaksha tv
ಬೆಂಗಳೂರು : ರಾಜ್ಯದಲ್ಲಿ ಹಿಂದೂ ಸಂಘಟನೆಗಳಿಂದ ಗಣೇಶೋತ್ಸವಕ್ಕೆ ಅನುಮತಿ ನೀಡಲು ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆಗಳಿವೆ.
ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಗಳು ಮತ್ತು ಸ್ವಪಕ್ಷೀಯರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಗಣೇಶೋತ್ಸವಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಷರತ್ತುಬದ್ಧ ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ, ಪ್ರಚಾರ, ಮದುವೆ, ವಿಜಯೋತ್ಸವ ಆಚರಣೆಗೆ ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಹೀಗಿರುವಾಗ ಗಣೇಶೋತ್ಸವ ಆಚರಣೆಗೆ ನಿಬರ್ಂಧ ಯಾಕೆ? ರಾಜಕಾರಣಿಗಳಿಗೆ ಒಂದು ನ್ಯಾಯ? ಜನರಿಗೆ ಒಂದು ನ್ಯಾಯ ಎಷ್ಟು ಸರಿ ಎಂದು ಪ್ರಶ್ನಿಸಿ ಹಿಂದೂ ಸಂಘಟನೆಗಳು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿವೆ.
ಇನ್ನು ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 4 ಗಂಟೆಗೆ ಕೊರೊನಾ ನಿಯಂತ್ರಣ ಸಂಬಂಧ ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.









