ಹಿಂದೂ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಸಿ ವಿಶ್ವಹಿಂದೂ ಪರಿಷತ್ ಭಜರಂಗದಳದ ಕಲ್ಲಡ್ಕ ವಲಯ ಅಧ್ಯಕ್ಷ ಪುಷ್ಪರಾಜ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಗಳೂರು ತಾಲೂಕಿನ ಉಲಾಯಿಬೆಟ್ಟು ಮಂಜಗುಡ್ಡೆ ನಿವಾಸಿ ಸಬೀನ್ ಯಾನೆ ಅಬ್ದುಲ್ ಸಲೀಂ ತನ್ನ ವಾಟ್ಸಪ್ ಗ್ರೂಪ್ ನಲ್ಲಿ ಕಲ್ಲಡ್ಕ ಪ್ರಭಾಕರ್ ಅವರ ಭಾವಚಿತ್ರ ವನ್ನು ವಿಕೃತವಾಗಿ ಎಡಿಟ್ ಮಾಡಿ, ಅವಹೇಳನಕಾರಿಯಾಗಿ ಬರೆದು ಪೋಸ್ಟ್ ಮಾಡಿದ್ದಾನೆ. ಹಾಗೇ ಪ್ರಧಾನಿ ನರೇಂದ್ರ ಮೋದಿ, ಗೃಹಮಂತ್ರಿ ಅಮಿತ್ ಶಾ, ಹಿಂದೂ ಧರ್ಮ ಹಾಗೂ ಆರ್.ಎಸ್. ಎಸ್ ಬಗ್ಗೆ ಅಶ್ಲೀಲ ಪದಗಳನ್ನು ಬರೆದು ನಿಂದಿಸಿದ್ದಾನೆ.
ವಿದೇಶದಲ್ಲಿರುವ ಭಾರತೀಯರಿಗೆ ಬೆದರಿಕೆ ಕರೆಯ ಜೊತೆಗೆ ಮತಾಂಧತೆಯ ದುರ್ವತನೆ ತೋರಿದ್ದಾನೆ ಎಂದು ಹೇಳಲಾಗಿದೆ. ದೇಶದ್ರೋಹಿ ಚಟುವಟಿಕೆ ಗಳಲ್ಲಿ ತೊಡಗಿರುವವರ ಜೊತೆ ಸಂಪರ್ಕ ಇದೆ ಎಂದು ಹೇಳಲಾಗಿದೆ. ಹಾಗಾಗಿ ಈತನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಭಜರಂಗದಳ ಕಾರ್ಯಕರ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.








