Puneet | ಪುನೀತ್‌ಗೆ ಮರಣೋತ್ತರ ಡಾಕ್ಟರೇಟ್ ಪ್ರದಾನ!
ಮೈಸೂರು : ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ಮೈಸೂರು ವಿಶ್ವ ವಿದ್ಯಾನಿಲಯದ 102 ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಈ ಗೌರವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಭಾವುಕರಾದರು.
ಇನ್ನು ಈ ಕಾರ್ಯಕ್ರಮದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ DRDO ಮಾಜಿ ಡೈರೆಕ್ಟರ್ ಜನರಲ್ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೂ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಘಟಿಕೋತ್ಸವದಲ್ಲಿ 28 ಸಾವಿರದ 581 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಪದವಿ ಪಡೆದವರಲ್ಲಿ ಮಹಿಳೆಯರೇ ಮೇಲುಗೈ . 56 ಸಾವಿರ 77 ಅಭ್ಯರ್ಥಿ ಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು.ಇದೇ ಸಂದರ್ಭದಲ್ಲಿ ವಿವಿಧ ಅಭ್ಯರ್ಥಿಗಳಿಗೆ ಚಿನ್ನದ ಪದಕ ಇತರೆ ಬಹುಮಾನ ವಿತರಿಸಲಾಯಿತು. Posthumous Doctorate awarded to Puneet