K-set ಕೆ-ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ
ಬೆಂಗಳೂರು : ಕೊರೊನಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಕಫ್ರ್ಯೂ ಘೋಷಿಸಿದ ಕಾರಣ 25 ರಂದು ನಡೆಯಬೇಕಿದ್ದ ಕೆ ಸೆಟ್ ಪರೀಕ್ಷೆ ಮುಂದೂಡಿಕೆಯಾಗಿದೆ.
ಈ ಬಗ್ಗೆ ಪ್ರಕಟನೆ ಹೊರಬಿದ್ದಿದ್ದು, ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆಯನ್ನು ಏಪ್ರಿಲ್ 25 ರ ಭಾನುವಾರ ನಡೆಸಲು ಪೂರ್ವಸಿದ್ಧತೆ ಮಾಡಿಕೊಂಡಿತ್ತು.
ಆದರೆ ಕೊರೊನಾ ವೈರಸ್ ಹರಡುತ್ತಿರುವ ಕಾರಣ ರಾಜ್ಯ ಸರ್ಕಾರ ಕಪ್ರ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಮತ್ತೆ ಮುಂದೂಡಲು ನಿರ್ಧರಿಸಲಾಗಿದೆ.
ಆದ್ದರಿಂದ ಮುಂದಿನ ಕೆಸೆಟ್ ಪರೀಕ್ಷಾ ದಿನಾಂಕವನ್ನ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ವಿ ಪ್ರಕಟಣೆಯಲ್ಲಿ ತಿಳಿಸಿದೆ.