ಆ.10 ರಂದು ದೇಶಾದ್ಯಂತ ವಿದ್ಯುತ್ ನೌಕರರ ಮುಷ್ಕರ
ಬೆಂಗಳೂರು : ವಿದ್ಯುತ್ ಖಾಸಗೀಕರಣ ವಿರೋಧಿಸಿ ಆಗಸ್ಟ್ 10 ರಂದು ದೇಶದಾದ್ಯಂತ ವಿದ್ಯುತ್ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.
ಅವತ್ತು ದೇಶದಾದ್ಯಂತ ವಿದ್ಯುತ್ ಖಾಸಗೀಕರಣ ವಿರೋಧಿಸಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ.
ವಿದ್ಯುತ್ ಕಂಪನಿಗಳಿಂದ ಆಗಿರುವ ಲಕ್ಷಾಂತರ ಕೋಟಿ ನಷ್ಟವನ್ನು ಸರಿದೂಗಿಸುವ ನೆಪದಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಮುಂದಾಗಿದೆ.
ಖಾಸಗೀಕರಣದಿಂದ ರೈತರು, ಬಡವರಿಗೆ ತೀವ್ರ ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಹಲವು ವಲಯಗಳನ್ನು ಖಾಸಗೀಕರಣ ಮಾಡಿದೆ.
ಅದೇ ರೀತಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ.
ಕೇಂದ್ರ ಸರ್ಕಾರದ ಈ ನಡೆಯನ್ನು ವಿರೋಧಿಸಿ ಆ.10ರಂದು ವಿದ್ಯುತ್ ನೌಕರರು ಪ್ರತಿಭಟನೆ ನಡೆಸಲಿದ್ದು, ಈ ಮುಷ್ಕರಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ.