ಪವರ್ ಸ್ಟಾರ್ ಬರ್ತ್ ಡೇ : ಉಚಿತ ಹೆಲ್ಮೆಟ್ ವಿತರಣೆ
ಚಿತ್ರದುರ್ಗ : ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ ಹಿನ್ನೆಲೆ ಕೋಟೆ ನಾಡು ಚಿತ್ರದುರ್ಗದಲ್ಲಿ ಅಪ್ಪು ಯೂತ್ ಬ್ರಿಗೇಟ್ ವತಿಯಿಂದ ಬೈಕ್ ಸವಾರರಿಗೆ ಉಚಿತ ಹೆಲ್ಮೆಟ್ ವಿತರಣೆ ಮಾಡಲಾಗಿದೆ.
ನಗರದ ಮಹತ್ಮ ಗಾಂಧಿ ವೃತ್ತದಲ್ಲಿ ಅಪ್ಪು ಯೂತ್ ಬ್ರಿಗೇಡ್, ಜಿಲ್ಲಾ ಪೊಲೀಸರು ಹಾಗೂ ಸಂಜೀವಿನಿ ಜೀವ ರಕ್ಷಕ ತಂಡದ ಸಹಯೋಗದಲ್ಲಿ ಆಯೋಜಿಸಿದ್ದ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಮೋಹನ್ ನೇತೃತ್ವದಲ್ಲಿ ಕೇಕ್ ಕತ್ತರಿಸಿದರು.
ಬಳಿಕ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸುತ್ತಿದ್ದ ಇಪ್ಪತ್ತಕ್ಕೂ ಹೆಚ್ಚು ಬೈಕ್ ಸವಾರರಿಗೆ ಉಚಿತ ಹೆಲ್ಮೆಟ್ ವಿತರಣೆ ಮಾಡಿ ಸಾಂಚಾರ ನಿಯಮ ಕುರಿತು ಜಾಗೃತಿ ಮೂಡಿಸಿದ್ರು.