prabhudeva
ಅನೇಕ ವರ್ಷಗಳಿಂದಲೂ ಸ್ಯಾಂಡಲ್ ವುಡ್ ನಿಂದ ದೂರವಿರುವ ಡ್ಯಾನ್ಸಿಂಗ್ ಕಿಂಗ್ ಪ್ರಭುದೇವ ಇದೀಗ ಮತ್ತೆ ಚಂದನವನಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಮೂಡಿ ಬರುತ್ತಿದೆ.
ಇಬ್ಬರು ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಅನೇಕ ದಿನಗಳಿಂದ ಕೇಳಿ ಬರುತ್ತಿದೆ.
ಈಗಾಗಲೇ ಸಿನಿಮಾದ ಕೆಲಸವನ್ನು ಪ್ರಾರಂಭ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದೀಗ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಸಿನಿಮಾದಲ್ಲಿ ಡ್ಯಾನ್ಸಿಂಗ್ ಕಿಂಗ್ ಪ್ರಭುದೇವ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಮೂಲಕ ಪ್ರಭ್ರುದೇವ ಅನೇಕ ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ.

ಈಗಾಗಲೇ ಪ್ರಭುದೇವ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರಂತೆ.
ಕಥೆ ಕೇಳಿ ಪ್ರಭುದೇವ ಇಂಪ್ರೆಸ್ ಆಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಚಿತ್ರದಲ್ಲಿ ನಟಿಸಲು ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ ಎನ್ನಲಾಗುತ್ತಿದೆ.
ತಂದೆಯಂತೇ ಮಗಳು… ಯೋಗರಾಜ ಭಟ್ಟರ ಮಗಳು

ಕನ್ನಡದಲ್ಲಿ ಎಚ್ ಟು ಓ ಮತ್ತು ಮನಸೆಲ್ಲಾ ನೀನೆ ಸಿನಿಮಾದಲ್ಲಿ ಪ್ರಭುದೇವ ನಟಿಸಿದ್ದರು. ಯೋಗರಾಜ್ ಭಟ್ ಸದ್ಯ ಗಾಳಿಪಟ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶಿವಣ್ಣ ಸದ್ಯ ಭಜರಂಗಿ-2 ಸಿನಿಮಾದ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿದ್ದಾರೆ.
prabhudeva








