ಭೂಪಾಲ್: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕಾರ್ಯಕ್ರಮವೊಂದರಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಉದ್ಘಾಟನೆ ಮಾಡಲು ಬಂದಿದ್ದರು. ಕಾರ್ಯಕ್ರಮದ ವೇಳೆ ಅನಾರೋಗ್ಯಕ್ಕೀಡಾಗಿದ್ದ ಸಂಸದೆ ಪ್ರಜ್ಞಾ ಸಿಂಗ್ ಕುಸಿದು ಬಿದ್ದಿದ್ದರು.
ಈ ವೇಳೆ ಅಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಸಂಸದೆ ಪ್ರಜ್ಞಾ ಸಿಂಗ್ ಕುರ್ಚಿ ಮೇಲೆ ಕುಳಿತುಕೊಳ್ಳುವುದಕ್ಕೆ ಸಹಕಾರ ನೀಡಿದ್ದಾರೆ.