ಸಿಎಂ ರಾಜೀನಾಮೆ ಕೊಡಿಸುವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದ ಜೋಶಿ…! prahlad joshi
ಹುಬ್ಬಳ್ಳಿ : ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸಿಎಂ ಬದಲಾವಣೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೆ ಪದೆ ಚೆರ್ಚೆಗೆ ಬಂದ ಹಿನ್ನೆಲೆ ಈ ರೀತಿ ಹೇಳಿರಬಹುದು. ಸಿಎಂ ಕೊವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.
ಕೊರೋನಾ ಸಂಕಷ್ಟ ಕಾಲದಲ್ಲಿ ಈ ವಯಸ್ಸಿನಲ್ಲೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಮರ್ಥರಿದ್ದಾರೆ, ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.









