ಹೊಸ “ಗಣ” ಪಾತ್ರದಲ್ಲಿ ಪ್ರಜ್ವಲ್ ದೇವರಾಜ

1 min read
Prajwal Devaraja as the new "Gan" Saaksha Tv

ಹೊಸ “ಗಣ” ಪಾತ್ರದಲ್ಲಿ ಪ್ರಜ್ವಲ್ ದೇವರಾಜ Saaksha Tv

ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ ದೇವರಾಜ ನಾಯಕರಾಗಿ ನಟಿಸುತ್ತಿರುವ ” ಗಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭಫಲಕ ತೋರಿದರು. ಪ್ರಜ್ವಲ ಪತ್ನಿ ರಾಗಿಣಿ ಚಂದ್ರನ ಕ್ಯಾಮೆರಾ ಚಾಲನೆ ಮಾಡಿದ್ದಾರೆ.

 

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾಸ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ .

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ ಛಾಯಾಗ್ರಹಣ ಹಾಗೂ ಹರೀಶ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌.

ಪ್ರಜ್ವಲ ಅವರಿಗೆ ನಾಯಕಿಯಾಗಿ ಸಾರಾ ಹರೀಶ (ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ ಕುಮಾರ, ರವಿ ಕಾಳೆ, ಶಿವರಾಜ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd